ಬೆಂಗಳೂರು:ಪಾಕಿಸ್ತಾನವೊಂದು ಸತ್ತ ಕುದುರೆಯಂತೆ. ಅದನ್ನು ಜಮ್ಮು ಕಾಶ್ಮೀರದ ಪೊಲೀಸರು ಬೇಕಾದರೂ ಸೋಲಿಸುತ್ತಾರೆ ಎಂದು ಕಾಂಗ್ರೆಸ್​ ಹಿರಿಯ ಮುಖಂಡ ಗುಲಾಮ್​ ನಬಿ ಅಜಾದ್​ ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೆರೆಯ ದೇಶದ ಹೆಸರಿನಲ್ಲಿ ತಮ್ಮ ವಾಕ್ಚಾತುರ್ಯ ಮೆರೆಯುತ್ತಿದ್ದಾರೆ. ರಾಷ್ಟ್ರದ ಗಮನವನ್ನು ಪ್ರಮುಖ ವಿಷಯಗಳಿಂದ ಬೇರೆಡೆಗೆ ತಿರುಗಿಸಲು ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಅಲ್ಲದೆ ಪಾಕಿಸ್ತಾನದ ಜತೆ ಭಾರತವನ್ನು ಹೋಲಿಸಿ ನಮಗೆ ಅಪಮಾನ ಮಾಡುತ್ತಿದ್ದಾರೆ ಎಂದಿದ್ದಾರೆ.
ಪ್ರಧಾನಿ, ಗೃಹ ಸಚಿವ, ಕೇಂದ್ರ ಸಚಿವರು ನಿರುದ್ಯೋಗದ ಬಗ್ಗೆ, ಜಿಡಿಪಿ, ಬೆಲೆ ನಿಯಂತ್ರಣದ ಬಗ್ಗೆ ಮಾತನಾಡುತ್ತಿಲ್ಲ. ಈ ಎಲ್ಲ ವಿಷಯಗಳು ಶ್ರೀಸಾಮಾನ್ಯನಿಗೆ ಅನ್ವಯವಾಗುವಂತವು. ಎಲ್ಲ ಜಾತಿ, ಧರ್ಮದವರಿಗೂ ಇವು ಅನ್ವಯವಾಗುತ್ತವೆ ಎಂದರು.
ಪಾಕಿಸ್ತಾನವು ನಮ್ಮ ಮೇಲೆ ದಾಳಿ ಮಾಡುತ್ತದೆ ಎಂದು ಪ್ರಧಾನಿ ಭಾರತೀಯರನ್ನು ಹೆದರಿಸುತ್ತಿದ್ದಾರೆ. ಇದು ನಮಗೆ ಅವಮಾನ ಮಾಡಿದಂತೆ. ಭಾರತಿಯರಾದ ನಾವು ಅಷ್ಟು ದುರ್ಬಲರೇ ಎಂದು ಪ್ರಶ್ನಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುವವರು ಕೇವಲ ಮುಸ್ಲಿಂರಲ್ಲ. ಅಲ್ಲಿ ಎಲ್ಲ ಜಾತಿಯವರೂ ಇದ್ದಾರೆ. ಈ ಬಗ್ಗೆ ಪಾರ್ಲಿಮೆಂಟ್​ನಲ್ಲಿ ಬಹುಮತ ಸಾಬೀತು ಪಡಿಸಿದ್ದು ವಿವೇಚನಾರಹಿತ ಕಾರ್ಯ ಎಂದರು.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ಮುಗ್ಧ ಹುಡುಗರು ಎಂದ ಅಜಾದ್​ ಅವರು ಇವರ ಸಾವಿನಿಂದಲೇ ಏನೋ ತಪ್ಪಾಗಿದೆ ಎಂದು ಎನಿಸುತ್ತದೆ ಎಂದು ಅರ್ಥವಾಗುವುದಿಲ್ಲವೆ ಎಂದು ಪ್ರಶ್ನಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
