ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ದೆಹಲಿಯ ಮೌಜ್​ಪುರ್​ ಏರಿಯಾದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವುದಾಗಿ ಭಾನುವಾರ ಸಂಜೆ ವರದಿಯಾಗಿದೆ.
ಸಿಎಎ ವಿರೋಧಿಸಿ ಸಾಕಷ್ಟು ಸಂಖ್ಯೆಯಲ್ಲಿ ಧರಣಿ ಕುಳಿತಿರುವ ಜಫರಾಬಾದ್ ಬಳಿಯೇ ಮೌಜ್​ಪುರ ಇದೆ. ಏಕಕಾಲದಲ್ಲಿ ಎರಡು ಗುಂಪುಗಳು ಒಂದೆಡೆ ಸೇರಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಹೀಗಾಗಿ ಜಫರಾಬಾದ್​ಗೆ ಹಾಗೂ ಮೌಜ್​ಪುರ್​ ಸಂಧಿಸುವ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿ ಪೂರ್ವ ಜಿಲ್ಲೆ ಸೇರಿದಂತೆ ಇತರೆ ಪ್ರದೇಶದ ಡಿಸಿಪಿಗಳಿಗೂ ಸ್ಥಳಕ್ಕೆ ಬುಲಾವ್​ ನೀಡಲಾಗಿದೆ. ಅಲ್ಲದೆ, ಅರೆಸೇನಾ ಪಡೆಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.
ಇದನ್ನೂ ಓದಿ:ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಜಾಫ್ರಾಬಾದ್​ ಪ್ರದೇಶಕ್ಕೂ ವಿಸ್ತರಣೆ
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿತ ಮತ್ತು ಸಿಎಎ ವಿರೋಧಿಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಇರದಿದ್ದ ಕಾರಣ ಪರಿಸ್ಥಿತಿ ನಿಯಂತ್ರಣಯನ್ನು ಮೀರಿತ್ತು. ಹೀಗಾಗಿ ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸ್​ ಸಿಬ್ಬಂದಿ ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಈ ಘಟನೆಯಲ್ಲಿ ಅನೇಕ ಪ್ರತಿಭಟನಾಕಾರರು ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಜೈ ಶ್ರೀರಾಮ ಎಂಬ ಘೋಷಣೆಯು ಮೊಳಗಿತ್ತು ಎಂದು ಹೇಳಲಾಗಿದೆ.
ಇದಕ್ಕೂ ಮುನ್ನ ಬಿಜೆಪಿಯ ವಿವಾದಿತ ನಾಯಕ ಕಪಿಲ್​ ಮಿಶ್ರಾ ಮತ್ತು ಇತರರು ಮಧ್ಯಾಹ್ನ 3 ಗಂಟೆ ಸಮಯಕ್ಕೆ ಜಫರಾಬಾದ್​ ಮೆಟ್ರೋ ನಿಲ್ದಾಣ ಬಳಿ ಬಂದು ರಸ್ತೆಯನ್ನು ಖಾಲಿ ಮಾಡುವಂತೆ ಪ್ರತಿಭಟನಾಕಾರರನ್ನು ಕೋರಿದ್ದಾರೆ. ಈ ವೇಳೆ ಮಾತಿನ ಚಕಮಕಿ ಉಂಟಾಗಿ 4 ಗಂಟೆ ಸುಮಾರಿಗೆ ರಸ್ತೆಗೆ ಇಳಿದ ಜನರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
Delhi: Stone pelting between two groups in Maujpur area, tear gas shells fired by Police.pic.twitter.com/Yj3mCFSsYk
— ANI (@ANI)February 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 7 =
Remember me
