ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಪಂಚಾಯತ್ ರಾಜ್ ಕಾಯ್ದೆಯನ್ನು ಅನ್ವಯಿಸುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಇದರೊಂದಿಗೆ ಅಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಶೀಘ್ರವೇ ಶುರುವಾಗಲಿದೆ. ಸಚಿವ ಸಂಪುಟ ಸಭೆಯ ನಂತರದಲ್ಲಿ ಈ ವಿಚಾರವನ್ನು ಮಾಹಿತಿ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ಧಾರೆ.
ಪ್ರಜಾಪ್ರಭುತ್ವವನ್ನು ಬೇರುಮಟ್ಟದಿಂದ ಬೆಳೆಸುವುದಕ್ಕೆ ಇದು ನೆರವಾಗಲಿದೆ. ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರವೂ ದೇಶದ ಇತರೆ ಭಾಗಗಳಲ್ಲಿರುವಂತಹ ವ್ಯವಸ್ಥೆಯನ್ನು ಕಾಣಲಿದೆ. ಅವರೂ ಅವರದ್ದೇ ಆದ ಜನಪ್ರತಿನಿಧಿಗಳನ್ನು ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ. ಆ ಜನಪ್ರತಿನಿಧಿಗಳು ಜಿಲ್ಲೆ, ತಾಲೂಕು, ಗ್ರಾಮ, ಪಟ್ಟಣಗಳ ಅಭಿವೃದ್ಧಿ ವಿಚಾರದಲ್ಲಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ಕೆಲಸ ಮಾಡಲಿದ್ದಾರೆ ಎಂದು ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಈರುಳ್ಳಿ ಬೆಲೆ ಏರಿಕೆ ತಡೆಗೆ ಆಮದು ನಿಯಮ ಸಡಿಲು
ಇದೇ ರೀತಿ, ಜಮ್ಮು-ಕಾಶ್ಮೀರದಲ್ಲಿ ಮಾರ್ಕೆಟ್ ಇಂಟರ್​ವೆನ್ಶನ್​ ಸ್ಕೀಮ್​ (ಎಂಐಎಸ್​) ಅನ್ನು ಸೇಬುಹಣ್ಣಿನ ವಹಿವಾಟಿಗೂ ಅನ್ವಯಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಇಂದು ತೆಗೆದುಕೊಂಡ ತೀರ್ಮಾನ ಪ್ರಕಾರ, ಇದು 2020-21ನೇ ಸಾಲಿಗೆ ಅನ್ವಯವಾಗುತ್ತಿದ್ದು, ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್​ ಮೂಲಕ ಜಾರಿಯಾಗಲಿದೆ. ಸೇಬು ಬೆಳೆಗಾರರ ಬ್ಯಾಂಕ್ ಖಾತೆಗೆ ನೇರ ಪ್ರಯೋಜನ ವರ್ಗಾವಣೆ (ಡಿಬಿಟಿ) ಮೂಲಕ ಹಣ ಸಂದಾಯವಾಗಲಿದೆ. (ಏಜೆನ್ಸೀಸ್)
ಕನ್ನಡವೂ ಸೇರಿ 8 ಭಾಷೆಗಳನ್ನು ಬೆಂಬಲಿಸುವ ಮೇಡ್​ ಇನ್ ಇಂಡಿಯಾ ಜಿಯೋ ಬ್ರೌಸರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − nine =
Remember me
