ಬೆಂಗಳೂರು:ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ರಚಿಸಲು ಸಿದ್ಧತೆ ನಡೆಸಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿಗೆ ಸಮಯ ಕೇಳಿದ್ದಾರೆ.
ಮಂಗಳವಾರ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ ಅವರು ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತಾಪಗಳ ಬಗ್ಗೆ ರ್ಚಚಿಸಲಿದ್ದಾರೆ. ಮುಖ್ಯವಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂಧನ ಸಚಿವ ರಾಜ್​ಕುಮಾರ್ ಸಿಂಗ್ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. ತರುವಾಯ ಸಂಜೆ ಪಕ್ಷದ ಅಧ್ಯಕ್ಷರ ಭೇಟಿ ಮಾಡುವ ಜತೆಗೆ ಅಮಿತ್ ಷಾ ಜತೆಯೂ ರ್ಚಚಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ‘ಸಂಪುಟ ವಿಚಾರದಲ್ಲಿ ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ. ಜೆ.ಪಿ.ನಡ್ಡಾ, ಅಮಿತ್ ಷಾ ಅವರನ್ನು ಭೇಟಿ ಮಾಡಿದಾಗ ಸೂಚನೆ ಬರುವ ನಿರೀಕ್ಷೆ ಇದೆ’ ಎನ್ನುವ ಮೂಲಕ ಸಂಪುಟ ಸರ್ಜರಿಯನ್ನು ಖಾತ್ರಿ ಮಾಡಿದ್ದಾರೆ. ಇನ್ನೊಂದೆಡೆ ಸಿಎಂ ದೆಹಲಿ ವಿಮಾನ ಏರಿದ ಬೆನ್ನಲ್ಲೇ ಅನೇಕ ಸಚಿವರೂ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಸಚಿವಾಕಾಂಕ್ಷಿಗಳೂ ಆಸೆ ಬಹಿ ರಂಗಪಡಿಸಲು ಆರಂಭಿಸಿದ್ದಾರೆ.
‘ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ನನಗೆ ಸಚಿವ ಸ್ಥಾನ ಕೊಡಿ ಎಂದು ಸಿಎಂ ಹಾಗೂ ಯಡಿಯೂರಪ್ಪ ಅವರನ್ನು ಕೇಳಿದ್ದೇನೆ’ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ‘ಹಿರಿತನವಿದ್ದರೂ ಸಚಿವ ಸ್ಥಾನ ಸಿಗದ ಶಾಸಕರಲ್ಲಿ ನಾನೂ ಒಬ್ಬ’ ಎಂದು ಮನದಿಂಗಿತ ಹೊರಹಾಕಿದ್ದಾರೆ.
ದೆಹಲಿಗೆ ಯಾರ್ಯಾರು?:ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಆರ್.ಅಶೋಕ್, ಸುನೀಲ್ ಕುಮಾರ್, ಶಂಕರ್ ಮುನೇನಕೊಪ್ಪ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್.
ವಿಜಯೇಂದ್ರ ಪರ ಲಾಬಿ:ಬಿ.ವೈ.ವಿಜಯೇಂದ್ರ ಕೂಡ ದೆಹಲಿಯತ್ತ ಮುಖಮಾಡಿದ್ದು, ಸಚಿವ ಸಂಪುಟ ಅಥವಾ ಸಂಘಟನೆಯಲ್ಲಿ ಆಗುವ ಬದಲಾವಣೆಯಲ್ಲಿ ಅವರು ಪ್ರಮುಖವಾಗಿ ಕಾಣಿಸಿಕೊಳ್ಳುವುದು ದಟ್ಟವಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಸಚಿವ ಗೋಪಾಲಯ್ಯ ಸೇರಿ ಕೆಲವರು ವಿಜಯೇಂದ್ರಗೆ ಸೂಕ್ತ ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ.
1. ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತು ಇತರ ಯೋಜನೆಗಳ ಬಗ್ಗೆ ರ್ಚಚಿಸಿ ಆಡಳಿತಾತ್ಮಕ, ತಾಂತ್ರಿಕ ಕೆಲಸಗಳನ್ನು ನಿಗದಿತ ಸಮಯದಲ್ಲಿ ಮುಗಿಸುವಂತೆ ಒತ್ತಡ ಹೇರಲು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿ
2. ಜಿಎಸ್ಟಿ ನಷ್ಟ ಪರಿಹಾರ ವಿಸ್ತರಿಸುವಂತೆ ಒತ್ತಡ ಹೇರಲು ಮತ್ತು ಜಿಎಸ್ಟಿ ಕುರಿತ ಇತರ ವಿಚಾರಗಳ ಬಗ್ಗೆ ನಿರ್ಮಲಾ ಸೀತಾರಾಮನ್ ಜತೆ ಚರ್ಚೆ
3. ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆ ಮಾಡಲು ಕೇಂದ್ರ ಒಪ್ಪಿದೆ, ಇದರ ಮುಂದುವರಿದ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಸಲು ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ
4.ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಅಗತ್ಯ ನೆರವು ಕೋರಿಕೆಗಾಗಿ ಇಂಧನ ಸಚಿವರ ಭೇಟಿ
5. ಪ್ರಧಾನಿ ಭೇಟಿ ಸಾಧ್ಯತೆ ಬಹಳ ಕಡಿಮೆ ಇದ್ದು, ಭೇಟಿಗೆ ಪ್ರಸ್ತಾಪವನ್ನೇ ಮಾಡುವುದಿಲ್ಲ
ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ವಿಷಯದ ಚರ್ಚೆಗಾಗಿ ದೆಹಲಿಗೆ ಬಂದಿಲ್ಲ. ಹೈಕಮಾಂಡ್ ನಾಯಕರು ಏನು ಮಾಡುತ್ತಾರೆ ನೋಡಬೇಕು. ಸಚಿವಾಕಾಂಕ್ಷಿಗಳು ದೆಹಲಿಗೆ ಬರುವುದು ಸಹಜ.
|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
ಸರ್ಕಾರದಲ್ಲಿ ಹೊಸತನ ತರುವ ಮೂಲಕ ಜನರಿಗೆ ಬದಲಾವಣೆಯ ಫ್ಲೇವರ್ ನೀಡುವ ಉದ್ದೇಶದಿಂದ ಸಂಪುಟದಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ಮಾಡುವುದು ಪ್ರಮುಖ ಉದ್ದೇಶ. ಕೆಲವು ಸಮುದಾಯಕ್ಕೆ ಪ್ರಾಧಾನ್ಯ ಕೊಡುವ ಉದ್ದೇಶದಿಂದ ಸರ್ಜರಿ ಅನಿವಾರ್ಯವಾಗಿದೆ. ಪ್ರಮುಖ ಸಮುದಾಯಗಳ ಗಮನ ಸೆಳೆಯಲು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆಯೂ ರ್ಚಚಿಸುವುದು ಅಲ್ಲದೆ, ಯಾರನ್ನು ಕೈಬಿಡಬೇಕೆಂಬುದು ನಾಯಕರ ಪ್ರಮುಖ ಚರ್ಚೆಯಾಗಿರಲಿದೆ. ಸರ್ಕಾರ ರಚನೆಗೆ ಸಹಕಾರ ನೀಡಿದ ವಲಸಿಗರೆಲ್ಲರನ್ನೂ ಉಳಿಸಿಕೊಳ್ಳಬೇಕೆಂಬ ಒತ್ತಾಯ ಯಡಿಯೂರಪ್ಪ ಕಡೆಯಿಂದ ಇದೆ. ಬೊಮ್ಮಾಯಿ ಈ ವಿಚಾರದಲ್ಲಿ ಬೇರೆ ಅಭಿಪ್ರಾಯ ಹೊಂದಿಲ್ಲ. ಆದರೆ, ಪಕ್ಷದ ಹಿರಿಯ ಸಚಿವರನ್ನು ಕೈಬಿಟ್ಟರೆ ಆಗುವ ಅಡ್ಡ ಪರಿಣಾಮದ ಬಗ್ಗೆ ನಾಯಕರಲ್ಲಿ ಆತಂಕವಿದೆ. ಇನ್ನೊಂದು ಮಗ್ಗುಲಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೆ ಚುನಾವಣೆಯಲ್ಲಿ ಪಕ್ಷಕ್ಕೆ ಎಷ್ಟು ಲಾಭವಾಗಲಿದೆ ಎಂಬುದರ ಅವಲೋಕನ ನಡೆದು ಹೊಸ ಸಚಿವರ ಪಟ್ಟಿ ಸಿದ್ಧವಾಗಲಿದೆ.
ಪಕ್ಷದ ರಾಜ್ಯಾಧ್ಯಕ್ಷರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಯವರ ಅಭಿಪ್ರಾಯಗಳು ಪ್ರಮುಖಪಾತ್ರ ವಹಿಸುತ್ತವೆ. ಬಳಿಕ, ರಾಜ್ಯ ಘಟಕದ ಅಭಿಪ್ರಾಯ ಪಕ್ಷದ ಅಧ್ಯಕ್ಷ ನಡ್ಡಾ ಮುಂದೆ ಪ್ರಸ್ತಾಪವಾಗಲಿದೆ. ನಂತರ ನಡ್ಡಾ ಅವರು ಅಮಿತ್ ಷಾ ಜತೆಗೆ ರ್ಚಚಿಸಿ ತೀರ್ಮಾನ ಪ್ರಕಟಿಸಲಿದ್ದಾರೆ.
ನವದೆಹಲಿ:ಕೃಷ್ಣಾ ನ್ಯಾಯಾಧಿಕರಣ ಐತೀರ್ಪಿನ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದೆ. ಕಾನೂನಾತ್ಮಕವಾಗಿ ಅಧಿಸೂಚನೆ ಹೊರಡಿಸಲು ಅವಕಾಶ ಇದೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಧಿಸೂಚನೆ ಬೇಡಿಕೆ ಕುರಿತ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿದ್ದು, ಪ್ರಕರಣದ ಹಿಂದಿನ ವಿಚಾರಣೆ ವೇಳೆ ಇಬ್ಬರು ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿದ್ದರು. ಹೊಸ ನ್ಯಾಯಮೂರ್ತಿಗಳ ನೇಮಕವಾದ ಕೂಡಲೇ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದರು.
ಮೇಕೆದಾಟಿಗೆ ಸಕಾರಾತ್ಮಕ ಪ್ರತಿಕ್ರಿಯೆ:ಮೇಕೆದಾಟು ಸಮಗ್ರ ಯೋಜನಾ ವರದಿ ಮತ್ತು ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಬೇಕು ಎಂಬ ಮನವಿಗೂ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿ ರಾಜ್ಯದ ವಿವಿಧ ಯೋಜನೆಗಳಿಗೆ ಹಣಕಾಸು ಬಿಡುಗಡೆ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಭೇಟಿಯಾಗುತ್ತೇನೆ ಎಂದು ಸಿಎಂ ತಿಳಿಸಿದರು.
ಗ್ರೀನ್ ಕಾರಿಡಾರ್:ಇಂಧನ ಸಚಿವ ಆರ್.ಕೆ. ಸಿಂಗ್​ರನ್ನು ಭೇಟಿಯಾಗಿ, ಗ್ರೀನ್ ಕಾರಿಡಾರ್ ಬಗ್ಗೆ ಚರ್ಚೆ ಮಾಡಿದ್ದೇನೆ. ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಲಾಗಿದೆ. ವಿದ್ಯುತ್ ಕ್ಷೇತ್ರಗಳ ಸುಧಾರಣೆ ಬಗ್ಗೆಯೂ ವಿಸõತ ಚರ್ಚೆ ನಡೆಯಿತು ಎಂದು ಬೊಮ್ಮಾಯಿ ವಿವರಿಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
