ಮುಂಬೈ:ಬಾಲಿವುಡ್​ ಡ್ರಗ್ಸ್​ ಪ್ರಕರಣದಲ್ಲಿ ಇದೀಗ ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್ ಅವರ ಅಳಿಯ ಸಮೀರ್​ ಖಾನ್​ ಅವರ ಹೆಸರು ಕೇಳಿಬಂದಿದೆ. ಈ ವಿಚಾರವಾಗಿ ಸಮೀರ್​ ಖಾನ್​ರನ್ನು ನಾರ್ಕೋಟಿಕ್ಸ್​ ಕಂಟ್ರೋಲ್​ ಬ್ಯೂರೋ ಅಧಿಕಾರಿಗಳು ವಿಚಾರಣೆ ನಡೆಸಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ಪತ್ನಿ ಈಗೀಗ ಮುಟ್ಟಲೂ ಬಿಡುತ್ತಿಲ್ಲ- ಬದುಕೇ ನರಕವಾಗಿದೆ: ಇದು ಮಾನಸಿಕ ಸಮಸ್ಯೆಯೆ?
ಕಳೆದ ವಾರ ಡ್ರಗ್ಸ್​ ಮಾರಾಟದ ಆರೋಪದಡಿಯಲ್ಲಿ ಬ್ರಿಟಿಷ್​ ಪ್ರಜೆ ಕರಣ್​ ಅಜ್ನಾನಿ ಮತ್ತಿಬ್ಬರನ್ನು ಬಂಧಿಸಲಾಗಿತ್ತು. ಅವರ ಬಳಿ 200 ಕೆಜಿ ಡ್ರಗ್ಸ್​ ವಶ ಪಡಿಸಿಕೊಳ್ಳಲಾಗಿತ್ತು. ಅವರೊಂದಿಗೆ ಸಮೀರ್​ ಖಾನ್​ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಅದೇ ಆರೋಪದಲ್ಲಿ ಇದೀಗ ಸಮೀರ್​ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಂಬೈ ದಕ್ಷಿಣದ ಎನ್​ಸಿಬಿ ಕಚೇರಿಗೆ ಸಮೀರ್​ ಬುಧವಾರ ಬೆಳಗ್ಗೆ 10 ಗಂಟೆಗೆ ಬಂದಿದ್ದು, ವಿಚಾರಣೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:‘ಗೋ ಮಾಂಸ ತಿನ್ನುವ ಸಿದ್ದರಾಮಯ್ಯಗೆ ಮೊದಲು ಶಿಕ್ಷೆಯಾಗಬೇಕು’ ಜಗದೀಶ್ ಶೆಟ್ಟರ್ ಹೇಳಿಕೆ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳು ಆಗಾಗ್ಗೆ ಭೇಟಿ ನೀಡುವ ಮುಂಬೈನ ಪ್ರಸಿದ್ಧ ‘ಮುಚಾದ್ ಪಾನ್ವಾಲಾ’ ಅಂಗಡಿಯ ಮಾಲೀಕರಲ್ಲಿ ಒಬ್ಬರಾದ ರಾಮ್‌ಕುಮಾರ್ ತಿವಾರಿ ಅವರನ್ನು ಸಂಸ್ಥೆ ಮಂಗಳವಾರ ಬಂಧಿಸಿದೆ. (ಏಜೆನ್ಸೀಸ್​)
ಡ್ರಾಪ್ ಕೊಟ್ಟ ಮಹಿಳೆಯ ದೇಹದ ಬಗ್ಗೆ ಕೆಟ್ಟದಾಗಿ ಪ್ರಶ್ನಿಸಿದ ಶಾಲಾ ಬಾಲಕ: ವಿಡಿಯೋ ಹರಿಬಿಟ್ಟ ಸಂತ್ರಸ್ತೆ!

ಎಂಗೇಜ್ಮೆಂಟ್​ ಆದ್ಮೇಲೆ ಸೆಕ್ಸ್​ ಮಾಡಿ ನೀ ಬೇಡ ಎಂದ; ಪೊಲೀಸರ ಮೊರೆ ಹೋದ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
