ಗುಜರಾತ್:ಇಲ್ಲಿನ ಮಾರ್ಬಿ ಪ್ರದೇಶದಲ್ಲಿ ಮಚ್ಚೂ ನದಿಗೆ ಅಡ್ಡಲಾಗಿ ಹಾಕಿರುವ ಕೇಬಲ್ ಬ್ರಿಡ್ಜ್ ಮುರಿದು ಬಿದ್ದಿದ್ದು, ಈ ಅವಘಡದಲ್ಲಿ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಹಲವರು ನೀರಿನಲ್ಲಿ ಮುಳುಗಿರುವ ಸಾಧ್ಯತೆ ಇದ್ದು, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇಂದು ಈ ಕೇಬಲ್ ಬ್ರಿಡ್ಜ್ ಮೇಲೆ 150 ಮಂದಿ ಇದ್ದಾಗ ಸಂಜೆ ಸುಮಾರು 6.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕೂಡಲೇ ಪ್ರಧಾನಿ ಮೋದಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದರಿಂದ, ಘಟನೆ ಸಂಭವಿಸಿದ ಹದಿನೈದೇ ನಿಮಿಷಗಳಲ್ಲಿ ತುರ್ತು ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ್​ ಸಾಂಘ್ವಿ ತಿಳಿಸಿದ್ದಾರೆ.
ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದ್ದು, ಮೃತಪಡುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಈ ಮಧ್ಯೆ ಗುಜರಾತ್ ಸರ್ಕಾರ ಪರಿಹಾರವನ್ನು ಘೋಷಿಸಿದೆ. ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.
ರಾಜ್ಯಕ್ಕೆ ಮೂರು ದಿನದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಹುಳಿ ಬರುವ ಮೊದಲೇ ಗುರಿ ತಲುಪುವ ಇಡ್ಲಿ-ದೋಸೆ ಹಿಟ್ಟು; ಹೊಸ ರೀತಿಯ ಸರಬರಾಜು..
ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಇಸ್ರೋ ಶಿವನ್, ನಟರಾದ ದತ್ತಣ್ಣ-ಅವಿನಾಶ್ ಸೇರಿ 67 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
