ನವದೆಹಲಿ:ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ವರ್ಷದಲ್ಲಿ ವಾರ್ಷಿಕವಾಗಿ ಸುಮಾರು 90 ಟಿಎಂಸಿ ನೀರು ಕಾವೇರಿ ನದಿಯಲ್ಲಿ ಹೆಚ್ಚುವರಿಯಾಗಿ ಲಭ್ಯವಿರುತ್ತದೆ. ಈ ನೀರನ್ನು ಬಳಸಿಕೊಳ್ಳಲು ನಮಗೆ ಅವಕಾಶ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಈ ಅರ್ಜಿಯನ್ನು ಸರ್ಕಾರ ಸಲ್ಲಿಸಿತ್ತು. ಅರ್ಜಿ ವಿಚಾರಣೆಗೆ ಸಮ್ಮತಿಸಿರುವ ಸುಪ್ರೀಂಕೋರ್ಟ್ ನ್ಯಾ. ಅಭಯ್ ಓಕಾ ಮತ್ತು ನ್ಯಾ ಉಜ್ಜಲ್ ಭುಯಾನ್, ಈ ಅರ್ಜಿಯಲ್ಲಿರುವ ಅಂಶಗಳು ಅಂತಾರಾಜ್ಯ ಜಲವಿವಾದ ಕಾಯ್ದೆ ಅನುಸಾರ ಸಮರ್ಥನೀಯವೇ? ಕಣಿವೆಯ ಮೇಲ್ಭಾಗದ ರಾಜ್ಯ ಕರ್ನಾಟಕಕ್ಕೆ ಹೆಚ್ಚುವರಿ ನೀರು ಬಳಸಿಕೊಳ್ಳುವ ಅಧಿಕಾರ ಇದೆಯೇ? ಹೆಚ್ಚುವರಿ ನೀರು ಬಳಸಿಕೊಳ್ಳುವ ಸಲುವಾಗಿ ಕರ್ನಾಟಕ ಕೈಗೆತ್ತಿಕೊಳ್ಳಲು ಬಯಸಿರುವ ಯೋಜನೆಗಳು ತಮಿಳುನಾಡಿನ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡಲಿದೆಯೇ ಇಲ್ಲವೇ ಎಂಬೆಲ್ಲಾ ಅಂಶಗಳ ಮೇಲೆ ವಿಚಾರಣೆ ನಡೆಸೋಣ ಎಂದು ಕಣಿವೆ ರಾಜ್ಯಗಳಿಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ 6 ವಾರಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಮುಂದಿನ ವಿಚಾರಣೆ ಮೇ. 7ಕ್ಕೆ ನಿಗದಿಯಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × three =
Remember me
