ನ್ಯೂಯಾರ್ಕ್:ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಕುರಿತು ಭಾರತದ ವಿರುದ್ಧ ಹೇಳಿಕೆ ನೀಡುವ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ಕೆನಡಾ ಪ್ರಧಾನಿ ನೀಡಿದ ಹೇಳಿಕೆಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಈ ವಿಷಯದಲ್ಲಿ ಭಾರತಕ್ಕೆ ಶ್ರೀಲಂಕಾದ ಬೆಂಬಲವೂ ಸಿಕ್ಕಿದೆ. ಶ್ರೀಲಂಕಾದ ವಿದೇಶಾಂಗ ಸಚಿವರು ಜಸ್ಟಿನ್ ಟ್ರುಡೊ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.
ಕೆನಡಾದಲ್ಲಿ ಸುರಕ್ಷಿತ ನೆಲೆ ಕಂಡುಕೊಂಡ ಭಯೋತ್ಪಾದಕರುಖಲಿಸ್ತಾನ್ ಪರ ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ತಾಣವಾಗಿ ಮಾರ್ಪಟ್ಟಿರುವುದು ಎಲ್ಲರಿಗೂ ತಿಳಿದೇ ಇದೆ. ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಕೂಡ ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ. ಕೆನಡಾದ ಪ್ರಧಾನಿ ಯಾವುದೇ ಸಾಕ್ಷ್ಯವಿಲ್ಲದೆ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಟ್ರೂಡೊ ಯಾವುದೇ ಪುರಾವೆಗಳಿಲ್ಲದೆ ಇಂತಹ ಅತಿರೇಕದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಶ್ರೀಲಂಕಾ ವಿರುದ್ಧ ಆಧಾರರಹಿತ ಆರೋಪ ಮಾಡಿದ ಕೆನಡಾಅಲಿ ಸಾಬ್ರಿ ಅವರು, “ಈ ಹಿಂದೆ ಕೆನಡಾ, ಶ್ರೀಲಂಕಾದ ವಿರುದ್ಧ ಆಧಾರರಹಿತ ಆರೋಪವನ್ನು ಮಾಡಿತ್ತು. ನಮ್ಮ ದೇಶದಲ್ಲಿ ಯಾವುದೇ ನರಮೇಧ ನಡೆದಿಲ್ಲ ಎಂದು ಎಲ್ಲರಿಗೂ ತಿಳಿದಿದೆ” ಎಂದರು.
ಭಾರತದ ವಿರುದ್ಧ ಟ್ರುಡೊ ಹೇಳಿದ್ದೇನು?ಖಲಿಸ್ತಾನಿ ಬೆಂಬಲಿಗ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ, ಸೆಪ್ಟೆಂಬರ್ 18 ರಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಹೇಳಿದ್ದರು. ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತೀಯ ಏಜೆನ್ಸಿಗಳಿವೆಯೇ ಎಂದು ಕೆನಡಾದ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಎಂದು ಟ್ರೂಡೊ ಹೇಳಿದ್ದಾರೆ. ಅಷ್ಟೇ ಅಲ್ಲ, ಕೆನಡಾ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿತು.
ಬೇಜವಾಬ್ದಾರಿ ಹೇಳಿಕೆ ಕೊಡುವುದನ್ನು ಬಿಡಿಭಾರತದೊಂದಿಗಿನ ವಿವಾದದ ಹೊರತಾಗಿ ಕೆನಡಾ ಮತ್ತೊಂದು ಸಂಕಷ್ಟದಲ್ಲಿದೆ. ವಾಸ್ತವವಾಗಿ, ಸರ್ವಾಧಿಕಾರಿ ಹಿಟ್ಲರ್‌ಗಾಗಿ ಹೋರಾಡಿದ 98 ವರ್ಷದ ನಾಜಿ ಸೈನಿಕ ಯಾರೋಸ್ಲಾವ್ ಹುಂಕಾ ಅವರನ್ನು ಕೆನಡಾದ ಸಂಸತ್ತಿನಲ್ಲಿ ಗೌರವಿಸಲಾಯಿತು . ನಾಝಿ ಸೈನಿಕನನ್ನು ಸನ್ಮಾನಿಸುವಾಗ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಉಕ್ರೇನ್‌ನ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಸಂಸತ್ತಿನಲ್ಲಿ ಉಪಸ್ಥಿತರಿದ್ದರು. ಈ ಘಟನೆಯ ನಂತರ, ಯಾರೋಸ್ಲಾವ್ ಹುಂಕಾ ಯಹೂದಿ ಸಮುದಾಯದ ವಿರುದ್ಧ ಹೋರಾಡಿದ್ದಾರೆ ಎಂದು ಕೆನಡಾದ ಯಹೂದಿ ಮಾನವ ಹಕ್ಕುಗಳ ಗುಂಪಿನ ಮೂಲಕ ವರದಿಯಾಗಿದೆ.
ಈ ಮಾಹಿತಿ ಬೆಳಕಿಗೆ ಬಂದ ನಂತರ, ಕೆನಡಾ ಸ್ಪೀಕರ್ ಕ್ಷಮೆಯಾಚಿಸಿದರು. ಆದರೆ, ಅಷ್ಟೊತ್ತಿಗಾಗಲೇ ತಡವಾಗಿತ್ತು. ಅಲಿ ಸಾಬ್ರಿ ಕೂಡ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ. ಯಹೂದಿ ಸಮುದಾಯದ ವಿರುದ್ಧ ಹೋರಾಡಿದ ಸೈನಿಕನನ್ನು ಕೆನಡಾ ಗೌರವಿಸಿದೆ ಎಂದು ಹೇಳಿದರು. ಅದೇ ಸಮಯದಲ್ಲಿ, ಯಾವುದೇ ಸಾರ್ವಭೌಮ ರಾಷ್ಟ್ರದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಅವರು ಟ್ರೂಡೊಗೆ ಸಲಹೆ ನೀಡಿದರು. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಟ್ರುಡೊ ಅವರ ಹೇಳಿಕೆಯನ್ನು ತಿರಸ್ಕರಿಸಿದ ಅಲಿ ಸಾಬ್ರಿ, ರಾಷ್ಟ್ರದ ನಾಯಕ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.
ಯಾರು ಈ ಕರಿಮಾ ಬಲೋಚ್?; ಬಲೋಚ್ ಹತ್ಯೆಯ ಕುರಿತು ಮೌನವಹಿಸಿರುವ ಟ್ರುಡೊಗೆ ಪ್ರಶ್ನೆ ಮಾಡಿದ ಬಿಎಚ್‌ಆರ್‌ಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
