ನವದೆಹಲಿ:ಮುಂದಿನ ಐದು ವರ್ಷಗಳಲ್ಲಿ ದೇಶದ ಕ್ಯಾನ್ಸರ್ ರೋಗಿಗಳ ಸಂಖ್ಯೆಯಲ್ಲಿ ಶೇ. 12 ಏರಿಕೆ ಕಂಡುಬರಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಎಚ್ಚರಿಸಿದೆ.
2020ರಲ್ಲಿ 1.39 ಮಿಲಿಯನ್ ಜನರು ಕ್ಯಾನ್ಸರ್​ನಿಂದ ಬಳಲುತ್ತಿದ್ದು, 2025ರ ವೇಳೆಗೆ ಆ ಸಂಖ್ಯೆ 1.5 ಮಿಲಿಯನ್​ಗೆ ಏರಿಕೆಯಾಗಲಿದೆ ಎಂದು ತಿಳಿಸಲಾಗಿದೆ. 2020ರಲ್ಲಿ 6,79,421 ಪುರುಷರು ಮತ್ತು 7,63,575 ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಯಾಗಿದೆ. 2025ರಲ್ಲಿ 7,12,758 ಪುರುಷರು ಮತ್ತು 8,06,218 ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಯಾಗುವ ಸಾಧ್ಯತೆಯಿದೆ. ಅದರಲ್ಲಿ ಶೇ. 14.8 ರೋಗಿಗಳು ಸ್ತನ ಕ್ಯಾನ್ಸರ್​ನಿಂದ ಬಳಲಲಿದ್ದಾರೆ. ಗರ್ಭಕೋಶ ಕ್ಯಾನ್ಸರ್​ನಿಂದ ಶೇ. 5.4 ರೋಗಿಗಳು ಮತ್ತು ಜೀರ್ಣಾಂಗವ್ಯೂಹದ ಕ್ಯಾನ್ಸರ್​ನಿಂದ ಶೇ. 19.7 ರೋಗಿಗಳು ಬಳಲಲಿದ್ದಾರೆ.
ಈ ವರ್ಷದ ವರದಿಯ ಪ್ರಕಾರ ಇದುವರೆಗಿನ ಕ್ಯಾನ್ಸರ್ ಪ್ರಕರಣಗಳಲ್ಲಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ ಕಾಣಿಸಿಕೊಂಡಿರುವ ಪಾಲು ಶೇ. 27.1ರಷ್ಟಿದೆ. ಪುರುಷರಲ್ಲಿ ಶ್ವಾಸಕೋಶ, ಬಾಯಿ, ಹೊಟ್ಟೆ ಕ್ಯಾನ್ಸರ್​ಗಳು ಹೆಚ್ಚಾಗಿವೆ. ಮಹಿಳೆಯರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್​ಗಳು ಹೆಚ್ಚಾಗಿವೆ. ಸರ್ಜರಿ, ಕಿಮೋಥೆರಪಿ ಮತ್ತು ರೇಡಿಯೇಷನ್ ಥೆರಪಿಗಳ ಮೂಲಕ ಕ್ಯಾನ್ಸರ್​ನ್ನು ಗುಣಪಡಿಸಬಹುದಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 3 =
Remember me
