ಮುಂಬೈ:ಬಾಲಿವುಡ್ ನಟಿ ಐಶ್ವರ್ಯ ರೈ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತನ್ನ ವಿಭಿನ್ನ ಲುಕ್‌ನಿಂದ ಮೋಡಿ ಮಾಡುತ್ತಾ ಬಂದಿದ್ದು, ಐಶ್ ದರ್ಶನಕ್ಕೆ ಕಾಯುತ್ತಿರುತ್ತಾರೆ. ಈ ಬಾರಿ ಬಹಳ ವಿಭಿನ್ನ ಅವತಾರದಲ್ಲಿ ಈ ಮಾಜಿ ವಿಶ್ವಸುಂದರಿ ಮನಸೂರೆಗೊಂಡಿದ್ದಾಳೆ.
ಇದನ್ನೂ ಓದಿ:‘ನನ್ನ ಜೀವನ ಪ್ರವೇಶಿಸಲಿದ್ದಾರೆ ವಿಶೇಷ ವ್ಯಕ್ತಿ’.. ಮದುವೆ ಬಗ್ಗೆ ಪ್ರಭಾಸ್ ಪೋಸ್ಟ್?
ಕೇನ್ಸ್‌ ರೆಡ್ ಕಾರ್ಪೆಟ್ ಮೇಲೆ ಐಶ್ ಹೆಜ್ಜೆ ಹಾಕಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಮಂಗಳೂರಿನ ಈ ಬೆಡಗಿ ದಶಕಗಳು ಉರುಳಿದರೂ ಚೆಲುವು ಕಿಂಚಿತ್ತೂ ಕಡಿಮೆಯಾಗಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಆಕೆಯ ಆತ್ಮವಿಶ್ವಾಸವೇ ಅದ್ಭುತ ಎನ್ನುತ್ತಿದ್ದಾರೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಬುಧವಾರ (ಮೇ 15) ರಾತ್ರಿಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಆಗ ಆಕೆಯ ಕೈಗೆ ಪೆಟ್ಟಾಗಿ ಬ್ಯಾಂಡೇಜ್ ಹಾಕಿಕೊಂಡಿದ್ದುದು ಕಂಡುಬಂದಿತ್ತು. ಇದನ್ನು ನೋಡಿದವರು, ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಆಕೆ ಕಾಣಿಸಿಕೊಳ್ಳುತ್ತಾರಾ? ರೆಡೆ ಕಾರ್ಪೆಟ್ ಮೇಲೆ ಹೆಜ್ಜಾ ಹಾಕ್ತಾರಾ? ಎನ್ನುವ ಅನುಮಾನ ಹಲವರಲ್ಲಿ ಮೂಡಿತ್ತು.
ಆದರೆ ಐಶ್ವರ್ಯಾ ರೈ ತನ್ನ ಬದ್ಧತೆ ಪ್ರದರ್ಶಿಸಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ದರ್ಶನ ಕೊಟ್ಟಿದ್ದಾರೆ. ಕೈಗೆ ಆದ ಗಾಯಕ್ಕೆ ತಲೆ ಕೆಡಿಸಿಕೊಳ್ಳದೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಕಾಣಿಸಿಕೊಂಡಿದ್ದಾರೆ. ಕಪ್ಪು, ಬಿಳಿ ಮತ್ತು ಚಿನ್ನದ ಬಣ್ಣಗಳಲ್ಲಿ ವಿನ್ಯಾಸಗೊಳಿಸಲಾದ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾಳೆ ಈ ಮಾಜಿ ಭುವನ ಸುಂದರಿ.
ಐಶ್​ ಅಂದಚೆಂದ ನೋಡಿ ನೋಡುಗರು ಹುಬ್ಬೇರಿಸಿದ್ದಾರೆ. ಈ ಹಿಂದೆ ಹಲವು ಬಾರಿ ಐಶ್ವರ್ಯಾ ಕೇನ್ಸ್ ಫೆಸ್ಟಿವಲ್‌ನಲ್ಲಿ ಮಿಂಚಿದ್ದರು. ಪ್ರತಿ ಬಾರಿಯೂ ವಿಭಿನ್ನ ಲಕ್‌ಗಳಲ್ಲಿ ದರ್ಶನ ಕೊಟ್ಟಿದ್ದಾರೆ. ಕೆಲವೊಮ್ಮೆ ತಮ್ಮ ಲುಕ್ ಕಾರಣಕ್ಕೆ ಟ್ರೋಲ್ ಕೂಡ ಆಗಿದ್ದೂ ಉಂಟು. ಆದರೆ ಅದರ ಬಗ್ಗೆ ಪ್ರತಿಕ್ರಿಯಿಸುವ ಗೋಜಿಗೆ ಹೋಗಲಿಲ್ಲ.
ಈವರೆಗೆ ಐಶ್ವರ್ಯಾ 21 ಬಾರಿ ಕೇನ್ಸ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಆದರೆ ಈ ಬಾರಿ ಗಾಯವನ್ನು ಲೆಕ್ಕಿಸದೇ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ನಗುನಗುತ್ತಲೇ ಪೋಸ್ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಇನ್ನು ಈ ಬಾರಿ ಕೈರಾ ಅದ್ವಾನಿ, ಶೋಭಿತಾ ದುಲಿಪಾಲ, ಅದಿತಿ ರಾವ್ ಹೈದರಿ ಕೇನ್ಸ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗಿ ಆಗುತ್ತಿದ್ದಾರೆ. ನಟಿ ದೀಪ್ತಿ ಸದ್ವಾನಿ ಈಗಾಗಲೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಅದಿತಿ ಮೂರನೇ ಬಾರಿ ಕಾಣಿಸಿಕೊಳ್ಳುತ್ತಿದ್ದು ಬಹಳ ಉತ್ಸುಕರಾಗಿದ್ದಾರೆ.
ಕೇನ್ಸ್ ಫೆಸ್ಟಿವಲ್‌ನಲ್ಲಿ ಭಾಗಿ ಆಗಲು ಸಿದ್ಧತೆ ನಡೆಸಿರುವುದಾಗಿ ಇತ್ತೀಚೆಗೆ ಎಎನ್‌ಐಗೆ ಮಾಹಿತಿ ನೀಡಿದ್ದರು. ಇನ್ನು ಕೈರಾ ಅದ್ವಾನಿ ಇದೇ ಮೊದಲ ಬಾರಿಗೆ ಕೇನ್ಸ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಕ್ಷಿಣದ ಸಿನಿಮಾಗಳಲ್ಲಿ ನಟಿಸಿರುವ ಶೋಭಿತಾ ಕೂಡ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯಮಟ್ಟದ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ. ಎಲ್ಲರೂ ಬೇರೆ ಬೇರೆ ಬ್ರ್ಯಾಂಡ್‌ಗಳನ್ನು ಪ್ರತಿನಿಧಿಸುತ್ತಿದ್ದಾರೆ.
12 ವರ್ಷದ ಬಳಿಕ ಹಾಲಿವುಡ್​ಗೆ ನಟಿ ಟಬು ರೀ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − four =
Remember me
