ನವದೆಹಲಿ:ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಮತ್ತೊಮ್ಮೆ ಐತಿಹಾಸಿಕ ಸಾಧನೆಗೈದ ನೀರಜ್​ ಚೋಪ್ರಾ ಅವರಿಗೆ ದೇಶಾದ್ಯಂತ ವ್ಯಾಪಕ ಮೆಚ್ಚುಗೆಗಳು ಹರಿದುಬರುತ್ತಿವೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯರೊಬ್ಬರು ಚಿನ್ನದ ಪದಕ ಗೆದ್ದಿರುವುದು ಇದೇ ಮೊದಲು. ತಮ್ಮ ಭರ್ಜರಿ ಗೆಲುವಿನ ಬೆನ್ನಲ್ಲೇ ಅಭಿಮಾನಿಯೊಬ್ಬರು ಭಾರತೀಯ ಧ್ವಜದ ಮೇಲೆ ನಿಮ್ಮ ಸಹಿ ಬೇಕು ಎಂದು ಕೇಳಿದ್ದಕ್ಕೆ, ನೀರಜ್​ ಕೊಟ್ಟ ಉತ್ತರ ಇದೀಗ ಅನೇಕರ ಪ್ರಶಂಸೆಗೆ ಪಾತ್ರವಾಗಿದೆ.
ಇದನ್ನೂ ಓದಿ:ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ನಿಂದ ಅನುಕೂಲ ಆಯ್ತ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ
ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಹಂಗೇರಿಯ ಅಭಿಮಾನಿಯೊಬ್ಬರು ನೀರಜ್​ ಚೋಪ್ರಾ ಅವರನ್ನು ಸಂಪರ್ಕಿಸಿ, ಭಾರತೀಯ ಧ್ವಜಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಚಿನ್ನದ ಹುಡುಗ, “ಇದು ನನ್ನ ಫ್ಲ್ಯಾಗ್ ಕೋಡ್‌ನ ಉಲ್ಲಂಘನೆಯಾಗಿದೆ” ಎಂದು ಹೇಳಿರುವ ಬಗ್ಗೆ ರೋಶನ್ ರೈ ಅವರು ತಮ್ಮ ಎಕ್ಸ್ (ಈ ಹಿಂದೆ ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಬಂಟರ ಸಂಘ ಬಂಟವಾಳದಿಂದ 52 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ಅಭಿಮಾನಿ ಧರಿಸಿದ್ದ ಟಿ-ಶರ್ಟ್​ ಮೇಲೆ ನೀರಜ್​ ಸಹಿ ಹಾಕುವ ಮುಖೇನ ಅವರನ್ನು ಸಂತಸಪಡಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಅನೇಕರು ನೀರಜ್​ ಚೋಪ್ರಾ ಅವರ ನಡೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).
‘ಓಜಿ’ ಫಸ್ಟ್​ ಲುಕ್​ ಇರುವುದಿಲ್ಲ ಎಂದ ಚಿತ್ರತಂಡ; ಕಾರಣ ಕೇಳಿದ ಪವನ್​ ಕಲ್ಯಾಣ್​ ಫ್ಯಾನ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
