ಗುರುಗ್ರಾಮ:ನಿಂತಿದ್ದ ಕಾರಿಗೆ ಕ್ಯಾಂಟರ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಘಾಜಿಯಾಬಾದ್​ ಮೂಲದ ಶತಾಕ್ಷಿ(26), ಪರೀಕ್ಷಾ(2), ಪರಿ(9 ತಿಂಗಳು), ವೇದಾಂಶ್​(6 ತಿಂಗಳು) ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ಪುಷ್ಪಾ(50), ರೇಣು(27), ಚಾರು(11), ಆರೋಹಿ(2) ಎಂದು ವರದಿಯಾಗಿದೆ.
ಇದನ್ನೂ ಓದಿ:ರಾತ್ರಿ ತಡವಾಗಿ ಮಲಗುವವರು ಬೇಗ ಸಾಯುವ ಸಾಧ್ಯತೆ ಅಧಿಕ: ಸಂಶೋಧನೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಯೊಬ್ಬರು ಅಪಘಾತವು ಬುಧವಾರ ತಡರಾತ್ರಿ 12:30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕಾರಿನ ಟೈರ್​ ಬದಲಿಸುವ ವೇಳೆ ದೆಹಲಿ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್​ ಒಂದು ಸ್ಯಾಂಟ್ರೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಕ್ಯಾಂಟರ್​ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿವಾಡಿಯಲ್ಲಿರುವ ಬಾಬಾ ಮೋಹನ್​ ರಾಮ್​ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
