ಚಂಡೀಗಢ:ಪಂಜಾಬ್​ ಕಾಂಗ್ರೆಸ್​ನಲ್ಲಿ ಬಿರುಕು ಉಂಟಾಗಿರುವ ವಿಚಾರ ಅನೇಕ ದಿನಗಳಿಂದ ಸುದ್ದಿಯಾಗುತ್ತಿದೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರೋಧದ ನಡುವೆಯೂ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ಹೈಕಮಾಂಡ್ ನೇಮಕ ಮಾಡಿದೆ. ಅದರ ಬೆನ್ನಲ್ಲೇ ಸಿಎಂ ಔತಣ ಕೂಟವೊಂದನ್ನು ಏರ್ಪಡಿಸಿದ್ದು ಸಾಕಷ್ಟು ಕುತೂಹಲಗಳಿಗೆ ನಾಂದಿ ಹಾಡಿದೆ.
ಅಮರಿಂದರ್ ಸಿಂಗ್ ಅವರು ಜುಲೈ 21ರಂದು ಪಂಚಕುಲದಲ್ಲಿ ಮಧ್ಯಾಹ್ನದ ಔತಣ ಕೂಟವನ್ನು ಆಯೋಜಿಸಿದ್ದಾರೆ. ಅದಕ್ಕೆ ಎಲ್ಲ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿದೆ. ಆದರೆ ಪಕ್ಷದ ಅಧ್ಯಕ್ಷ ನವಜೋತ್ ಸಿಂಗ್​ಗೆ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಯಾವ ಕಾರಣಕ್ಕಾಗಿ ಈ ಔತಣ ಕೂಟ ನಡೆಸಲಾಗುತ್ತಿದೆ ಎನ್ನುವ ಮಾಹಿತಿಯಿಲ್ಲ. ಆದರೆ ನವಜೋತ್ ಸಿಂಗ್​ಗೆ ಆಹ್ವಾನ ಇಲ್ಲದಿರುವುದು, ಸಿಎಂ ಮತ್ತು ಅವರ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಎತ್ತಿ ತೋರಿಸಿದಂತಾಗಿದೆ.
ನವಜೋತ್​ ಸಿಂಗ್​ರನ್ನು ಭಾನುವಾರದಂದು ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರೊಂದಿಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸಂಗತ್ ಸಿಂಗ್ ಗಿಲ್ಜಿಯನ್, ಸುಖ್​ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್​, ಕುಲ್ಜಿತ್ ಸಿಂಗ್ ನಗ್ರ ಅವರು ನೇಮಕಗೊಂಡಿದ್ದಾರೆ. ಈ ಪಟ್ಟಿ ಹೊರಬೀಳುತ್ತಿದ್ದಂತೆಯೇ ಅಮರಿಂದರ್​ ಸಿಂಗ್ ಹೊರೆತುಪಡಿಸಿದ ಪಕ್ಷದ ನಾಯಕರೆಲ್ಲರೂ ನವಜೋತ್​ ಸಿಂಗ್​ಗೆ ಶುಭ ಹಾರೈಸಿದ್ದಾರೆ. (ಏಜೆನ್ಸೀಸ್)
1.25 ಲಕ್ಷ ರೂಪಾಯಿಗೆ ಮಾರಾಟವಾಯ್ತು ಜೋಡಿ ಟಗರು!

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ಮಾಡಿದ ಚಕ್ರವರ್ತಿ! ಬಿಗ್​ಬಾಸ್​ನಿಂದ ಕಾದಿದೆಯಾ ದೊಡ್ಡ ಶಿಕ್ಷೆ?

ಪ್ರಿಯಾಂಕಾ ಬರ್ತ್​ಡೇಗೆ ಪತಿ ಕೊಟ್ಟ ಗಿಫ್ಟ್ ಏನು ಗೊತ್ತಾ? ಅಮೆರಿಕದಿಂದ ಬಂದ ದುಬಾರಿ ಉಡುಗೊರೆ ಕಂಡು ಪಿಗ್ಗಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
