ಚಂಡಿಗಢ:ಕಳೆದ ವರ್ಷ ಕಾಂಗ್ರೆಸ್​ ತೊರೆದಿದ್ದ ಪಂಜಾಬ್​ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ನಾಯಕ ಅಮರಿಂದರ್​​ ಸಿಂಗ್​ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ತಮ್ಮ ಪಕ್ಷ ಪಂಜಾಬ್​ ಲೋಕ್​ ಕಾಂಗ್ರೆಸ್​ ವಿಲೀನಗೊಳಿಸುವ ಸಾಧ್ಯತೆ ಇದೆ.
ಸದ್ಯ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿರುವ ಅವರು ಲಂಡನ್​​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅಲ್ಲಿಂದ ಬಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಭಾನುವಾರವೇ ಶಸ್ತ್ರಚಿಕಿತ್ಸೆಗೊಳಗಾಗಿರುವ ಅಮಿರಿಂದರ್ ಸಿಂಗ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್​ ಅವರು, ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.(ಏಜೆನ್ಸೀಸ್​)
ಉದ್ಧವ್​ ಠಾಕ್ರೆ ಪರ ಟ್ವೀಟ್ ಮಾಡಿ ಅಪಹಾಸ್ಯಕ್ಕೊಳಗಾದ ಬಾಲಿವುಡ್​ ನಟಿ ದಿಯಾ ಮಿರ್ಜಾ, ಕಾಶ್ಮೀರಿ ಫೈಲ್ಸ್​ ನಿರ್ದೇಶಕರಿಂದಲೂ ತರಾಟೆ!

ಅಮಿತ್​ ಶಾ ಅವರು ಈ ಮಾತು ನಡೆಸಿಕೊಟ್ಟಿದ್ದರೆ ಬಿಜೆಪಿ ಜತೆಯಲ್ಲೇ ಇರುತ್ತಿದ್ದೆವು: ಉದ್ಧವ್​ ಠಾಕ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twelve =
Remember me
