ತಮಿಳುನಾಡು:ಬೆಳ್ಳಂಬೆಳಗ್ಗೆ ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಭಾನುವಾರ (ಅ.15) ವರದಿಯಾಗಿದೆ.
ಇದನ್ನೂ ಓದಿ:ಮೈಸೂರು ದಸರಾ ಫಿಲ್ಮ್ ಫೆಸ್ಟ್; 7 ದಿನಗಳ ಕಾಲ ಪ್ರದರ್ಶನಗೊಳ್ಳಲಿರುವ ಸಿನಿಮಾಗಳಾವವು?
ತಿರುವಣ್ಣಾಮಲೈನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ಕರ್ನಾಟಕ ಮೂಲದ ಎಂಟು ಜನರನ್ನು ಒಳಗೊಂಡಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನವನ್ನು ಬೇರ್ಪಡಿಸಿದ ನಂತರ ಮೃತ ದೇಹಗಳನ್ನು ಹೊರತೆಗೆಯಲಾಯಿತು. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಪತ್ತೆಗೆ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಈಗ ಕಸಕ್ಕೂ ಬಾಯಿ ಹಾಕಿದೆ;  ಕುಮಾರಸ್ವಾಮಿ ವ್ಯಂಗ್ಯ
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ,(ಏಜೆನ್ಸೀಸ್).
BiggBoss Kannada S10: ತುಕಾಲಿ ಸಂತುಗೆ ಕಿಚ್ಚನ ಕ್ಲಾಸ್; ಪ್ರತಾಪ್​ಗೆ ಅವಕಾಶ ಬೇಕೆಂದ​ ‘ಬಿಗ್​’ ಮಂದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
