ತಮಿಳುನಾಡು:ಬುಧವಾರ (ಸೆ.06) ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಸೇಲಂನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಈ ದೇವಸ್ಥಾನದಲ್ಲಿ ಇಲಿಗಳಿಗೆ ಮೊದಲ ನೈವೇದ್ಯ; ನಂತರ ಉಳಿಯುವುದು ಭಕ್ತರಿಗೆ ಪ್ರಸಾದ…
ಅಪಘಾತದಲ್ಲಿ ಒಂದು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಪಳನಿಸ್ವಾಮಿ (59), ಪಿ ಪಾಪತಿ (47), ಸೆಲ್ವರಾಜ್ (55), ಮಂಜುಳಾ (42), ಅರುಮುಗಂ (49), ಮತ್ತು ಸಂಜನಾ (1) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಚಾಲಕ ವಿಘ್ನೇಶ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಹಾನಿ ಸರ್ವೆ ಮಾಡಿ ಪರಿಹಾರಕ್ಕೆ ಕ್ರಮಕೈಗೊಳ್ಳಿ
ಟ್ರಕ್‌ನ ಚಾಲಕ ವಾಹನದ ಪಾರ್ಕಿಂಗ್​ ಸಿಗ್ನಲ್ ಆನ್ ಮಾಡದೆ, ನಿದ್ರಿಸುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದ ಬೆನ್ನಲ್ಲೇ ಲಾರಿ ಚಾಲಕ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).
https://twitter.com/PTI_News/status/1699277193216421972?s=20
‘ಸಲಾರ್’​ ಘೋಷಿಸಿದ್ದ ದಿನದಂದು ರಿಲೀಸ್​ ಆಗಲಿದೆ ರಾಮ್ ಪೋತಿನೇನಿ ನಟನೆಯ ‘ಸ್ಕಂದ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 4 =
Remember me
