ಉತ್ತರಾಖಂಡ:ಆದಿ ಕೈಲಾಸನ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಲಖನ್‌ಪುರ ಬಳಿ ಕಾಳಿ ನದಿಗೆ ಬಿದ್ದ ಪರಿಣಾಮ ಆರು ಜನರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಮಂಗಳವಾರ (ಅ.24) ವರದಿಯಾಗಿದೆ.
ಇದನ್ನೂ ಓದಿ:ಆರ್ಮುಗಂ ರವಿಶಂಕರ್​ ಪುತ್ರ ಈಗ ಹೀರೋ ! ಮಗ ಅದ್ವೈ ಚಿತ್ರಕ್ಕೆ ಅಪ್ಪನೇ ನಿರ್ದೇಶಕ..
ಘಟನೆ ಬಗ್ಗೆ ಪಿಥೋರಗಢ್ ಪೊಲೀಸ್ ಅಧೀಕ್ಷಕ (SP) ಲೋಕೇಶ್ವರ್ ಸಿಂಗ್ ಮಾತನಾಡಿ, “ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಸಂತ್ರಸ್ತರು ಆದಿ ಕೈಲಾಸನ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ” ಎಂದು ಹೇಳಿದರು.
धारचूला-लिपुलेख सड़क मार्ग पर लखनपुर के समीप दुर्भाग्यपूर्ण सड़क दुर्घटना में यात्रियों के हताहत होने का अत्यंत दु:खद समाचार प्राप्त हुआ।
ईश्वर से प्रार्थना है कि दिवंगत आत्माओं को अपने श्रीचरणों में स्थान एवं शोक संतप्त परिजनों को यह असीम कष्ट सहन करने की शक्ति प्रदान करें।
ॐ…
— Pushkar Singh Dhami (@pushkardhami)October 24, 2023

ಆದಿ ಕೈಲಾಸನ ದರ್ಶನಕ್ಕೆ ತೆರಳಿದ್ದ 6 ಯಾತ್ರಿಕರ ಪೈಕಿ ಇಬ್ಬರು ಬೆಂಗಳೂರಿನವರು, ಇಬ್ಬರು ತೆಲಂಗಾಣದವರು ಮತ್ತು ಇಬ್ಬರು ಉತ್ತರಾಖಂಡದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸ್ಪಂದಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:2030ರ ವೇಳೆಗೆ ಭಾರತ ನಂ.3: 7.3 ಟ್ರಿಲಿಯನ್ ಡಾಲರ್ ಜಿಡಿಪಿ, ಜಪಾನ್ ಹಿಂದಿಕ್ಕಲಿದೆ ಎಂದ ತಜ್ಞರು
“ಘಟನೆ ಸಂಜೆ ವೇಳೆ ಸಂಭವಿಸಿದ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕೆಲಸವನ್ನು ಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಬುಧವಾರ (ಅ.25) ಬೆಳಗ್ಗೆಯಿಂದ ಶೋಧ ಕಾರ್ಯ ಆರಂಭವಾಗಲಿದೆ” ಎಂದು ಎಸ್ಪಿ ಹೇಳಿದರು,(ಏಜೆನ್ಸೀಸ್).
BBKS10: ನಟಿ ತಾರಾ ಮುಂದೆ ಕಣ್ಣೀರಿಟ್ಟ ಪ್ರತಾಪ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 18 =
Remember me
