ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಹೆಚ್ಚು ಸದ್ದು ಮಾಡುತ್ತಿದೆ.
ಹೊಸ ಪ್ರಕರಣ ಒಂದರಲ್ಲಿ ಕಾರ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಒಬ್ಬರನ್ನು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಸಂತ್ರಸ್ತ ಪ್ರವೀಣ್​ ಜಂಗ್ರಾ ಎಂಬುವವರು ಟ್ವಿಟರ್​ನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು ಬೈಕಿನಲ್ಲಿ ಬರುವ ದುರ್ಷ್ಕಮಿಗಳು ಕಾರನ್ನು ಅಡ್ಡಗಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿ ಹೊರಟು ಹೋಗುತ್ತಾರೆ.
ಇದನ್ನೂ ಓದಿ:ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಆಭರಣ ಮಳಿಗೆ ದರೋಡೆ; ಖದೀಮರು ಅರೆಸ್ಟ್​
ಈ ಕುರಿತು ಟ್ವೀಟ್​ ಮಾಡಿರುವ ಸಂತ್ರಸ್ತ ಕೆಲ ಕಿಡಿಹೇಡಿಗಳು ನನ್ನ ಕಾರನ್ನು ಅಡ್ಡಗಟ್ಟಿ ನಡುರಸ್ತೆಯಲ್ಲಿ ಥಳಿಸಿದ್ದಾರೆ. ನಂಗ್ಲೋಯ್​ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಈ ರೀತಿಯ ಗೂಂಡಾಗಿರಿ ಸಾಮಾನ್ಯವಾಗಿದೆ. ದೆಹಲಿ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಔಟರ್​ ಡೆಲ್ಲಿ ಡಿಸಿಪಿ ಹರೇಂದ್ರ ಸಿಂಗ್​ ಅವರು ಅದನ್ನು ಮಾಡಿದ್ದರು ನಾವು ಇದನ್ನು ಮಾಡಿದ್ದೆವು(They did this, we did this) ಎಂದು ಟ್ವೀಟ್​ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
They did this, we did this.pic.twitter.com/tGISHjTsmw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
