ಅಹಮದಾಬಾದ್​:16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೃದ್ರೋಗ ತಜ್ಞ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿರುವ ಘಟನೆ ಗುಜರಾತಿನ ಜಾಮ್​ನಗರದಲ್ಲಿ ನಡೆದಿದೆ.
ಖ್ಯಾತ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ(41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ವೈದ್ಯರ ಸಾವಿನಿಂದ ಶೋಕ ಮಡುಗಟ್ಟಿದ್ದು ಜಾಮ್​ನಗರದಲ್ಲಿ ಇದ್ದ ಅತ್ಯುತ್ತಮ ಹೃದ್ರೋಗ ತಜ್ಞರಲ್ಲಿ ಇವರು ಕೂಡ ಒಬ್ಬರು ಎಂದು ಹೇಳಲಾಗಿದೆ.
ಈ ಕುರಿತು ಪೊಲೀಸ್​ ಅಧಿಕಾರಿ ಒಬ್ಬರು ಪ್ರತಿಕ್ರಿಯಿಸಿದ್ದು ಸೋಮವಾರ ರಾತ್ರಿ ಎಂದಿನಂತೆ ತಮ್ಮ ಕಾರ್ಯ ಮುಗಿಸಿ ಮನೆಗೆ ವಾಪಸ್ಸಾಗಿದ್ದ ವೈದ್ಯ ಗಾಂಧಿ ಅವರು ಮಲಗಿರುವಾಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ಧಾರೆ. ಎಂದಿನಂತೆ ಕುಟುಂಬಸ್ಥರ ಜೊತೆಗೆ ಆಹಾರ ಸೇವಿಸಿದ ಗೌರವ್ ಸಾಮಾನ್ಯವಾಗಿ ಇದ್ದರೂ ಅವರ​ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ.
ಇದನ್ನೂ ಓದಿ:ವರ್ಷಪೂರ್ತಿ ಎಸ್​.ಆರ್. ಬೊಮ್ಮಾಯಿ ಜಯಂತಿ: ಮಾಜಿ ಸಿಎಂ ಬಸವರಾಜ
ಮರುದಿನ ಬೆಳಗ್ಗೆ ಸುಮಾರು 6 ಘಂಟೆಗೆ ಕುಟುಂಬಸ್ಥರು ಅವರನ್ನು ಏಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ಯಾರ ಮಾತಿಗೂ ಪ್ರತಿಕ್ರಿಯಿಸಲಿಲ್ಲ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಗೌರವ್​ ಮೃತಪಟ್ಟಿರುವುದಾಗಿ ಘೋಷಿಸಿದ್ಧಾರೆ ಎಂದು ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.
ವೈದ್ಯ ಗೌರವ್​ ಗಾಂಧಿ ಇಲ್ಲಿಯವರೆಗೂ 16,000ಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರಬಹುದು ಎಂದು ವೈದ್ಯರು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
