ಜೈಪುರ:ಇಬ್ಬರು ವಿದ್ಯಾರ್ಥಿಗಳ ನಡುವಿನ ಗಲಾಟೆ ಕೋಮು ಸಂಘರ್ಷವಾಗಿ ಮಾರ್ಪಟ್ಟು ಉದ್ವಿಘ್ನ ಪರಿಸ್ಥಿತಿ ಉಂಟಾಗಿರುವ ಘಟನೆ ರಾಜಸ್ಥಾನದ ಉದಯ್​ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಅರ್ಧ ಡಜನ್​ಗೂ ಹೆಚ್ಚಿನ ಕಾರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ನಗರದ ಹಲವೆಡೆ ಕಲ್ಲು ತೂರಾಟ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಉದಯ್​ಪುರದ ಮಧುಬನ್​ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 10ನೇ ತರಗಿ ವಿದ್ಯಾರ್ಥಿಗೆ ಸಹಪಾಠಿ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡಿರುವ ವಿದ್ಯಾರ್ಥಿ ಹಿಂದು ಆಗಿದ್ದು, ಚಾಕುವಿನಿಂದ ಇರಿದ ವಿದ್ಯಾರ್ಥಿ ಮುಸ್ಲಿಂ ಎಂಬುದಾಗಿ ತಿಳಿದು ಬಂದಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಅಹಿತ ಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
★उदयपुर स्कूली बच्चों में चाकूबाजी का मामला★जिला कलेक्टर अरविंद पोसवाल और पुलिस अधीक्षक योगेश गोयल मौजूद हैं एमबी अस्पताल में★कलेक्टर बोले घायल बच्चे का बेस्ट डॉक्टर्स की टीम कर रही है उपचार★ बच्चे के जल्द रिकवर होने की है उम्मीद शहरवासी अफवाहों पर नहीं दे ध्यानpic.twitter.com/Vy7HDe0WZ2
ಇದನ್ನೂ ಓದಿ:ಕೆಜಿಎಫ್​, ಕಾಂತಾರ ಅಷ್ಟೇ ಅಲ್ಲಾ… ಕನ್ನಡಕ್ಕೆ ಲಭಿಸಿದ್ದು ಒಟ್ಟು 7 ಪ್ರಶಸ್ತಿಗಳು; ಇನ್ಯಾರಿಗೆ ಬಂತು ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯೋಗೇಶ್​ ಗೋಯೆಲ್​ ಮಾತನಾಡಿ, ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಬಲಪಂಥೀಯ ಸಂಘಟನೆಗಳು ಶಾಲೆ ಬಳಿ ನಿಲ್ಲಿಸಲಾಗಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಇದಲ್ಲದೆ ನಗರದ ಹಲವೆಡೆ ಕಲ್ಲುತೂರಾಟ ನಡೆದಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಗಾಯಾಳುವಿಗೆ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯೋಗೇಶ್​ ಗೋಯೆಲ್​ ಮಾಹಿತಿ ನೀಡಿದ್ದಾರೆ.
BREAKING: Massive outrage and communal tension in Udaipur, Rajasthan, after a Dalit Hindu minor student, studying in the 10th standard, was brutally attacked by an Islamist student inside the school premises. The perpetrator assaulted him multiple times with knife.Entire…pic.twitter.com/E8f3hflOrj
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
