ಚೆನ್ನೈ :ಹಲವು ವಿದ್ಯಾರ್ಥಿಗಳು ಲೈಂಗಿಕ ಶೋಷಣೆಯ ಆರೋಪ ಮಾಡಿದ ನಂತರ, ತಮಿಳುನಾಡಿನ ಸ್ವಯಂಘೋಷಿತ ಆಧ್ಯಾತ್ಮಿಕ ಗುರು ಶಿವ ಶಂಕರ ಬಾಬಾ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಚೆನ್ನೈ ಬಳಿಯ ಕೆಲಂಬಕ್ಕಂನಲ್ಲಿರುವ ಬಾಬಾರ ಸುಶೀಲ್ ಹರಿ ಇಂಟರ್​ನ್ಯಾಷನಲ್ ರೆಸಿಡೆನ್ಷಿಯಲ್​ ಸ್ಕೂಲ್​ನ ಹಳೆಯ ವಿದ್ಯಾರ್ಥಿಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಥೆ ಬಿಚ್ಚಿಟ್ಟಿದ್ದರು ಎನ್ನಲಾಗಿದೆ.
ಅವರ ದೂರುಗಳ ಮೇಲೆ ಮಕ್ಕಳ ಕಲ್ಯಾಣ ಸಮಿತಿಯು ಬಾಬಾರನ್ನು ವಿಚಾರಣೆಗೆ ಸಮ್ಮನ್​ ಮಾಡಿತ್ತು. ಆದರೆ ಬಾಬಾ ಆ ವಿಚಾರಣೆಗೆ ಹಾಜರಾಗಲಿಲ್ಲ. ಬಾಬಾಗೆ ಎದೆನೋವು ಬಂದು ಡೆಹ್ರಾಡೂನ್​ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ತಂಡ ಹೇಳಿತ್ತು ಎನ್ನಲಾಗಿದೆ.
ಇದನ್ನೂ ಓದಿ:ಹೆಂಡತಿ ಇಲ್ಲದ ಸಮಯದಲ್ಲಿ ಮಗಳನ್ನು ರೇಪ್ ಮಾಡಿ ಗರ್ಭಿಣಿ ಮಾಡಿದ… ಆಸ್ಪತ್ರೆಯಲ್ಲಿ ಬಯಲಾಯಿತು ರಹಸ್ಯ!
ಲೈಂಗಿಕ ಶೋಷಣೆ ಎದುರಿಸಿದರೆನ್ನಲಾದ ಮೂವರು ಹಳೆಯ ವಿದ್ಯಾರ್ಥಿಗಳ ದೂರಿನ ಮೇರೆಗೆ ಕೆಲಂಬಕ್ಕಮ್​ನ ಆಲ್​ ವುಮೆನ್​ ಪೊಲೀಸ್​ ಠಾಣೆಯಲ್ಲಿ ಶಿವಶಂಕರ ಬಾಬಾ ಮೇಲೆ ಐಪಿಸಿ ಸೆಕ್ಷನ್ 354, 363, 365, 366 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಸಿಐಡಿಗೆ ವರ್ಗಾಯಿಸಲಾಗಿದ್ದು, ಇಬ್ಬರು ಅಪ್ರಾಪ್ತವಯಸ್ಕರೂ ಸೇರಿದಂತೆ 13 ಸಂತ್ರಸ್ತರನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.(ಏಜೆನ್ಸೀಸ್)
ಪುಟ್ಟ ಬಾಲಕನ ಚಿಕಿತ್ಸೆಗೆ ಒದಗಿಬಂತು 16 ಕೋಟಿ ರೂ.ಗಳ ಚುಚ್ಚುಮದ್ದು
VIDEO | ನೀರುತುಂಬಿದ ರಸ್ತೆಯಲ್ಲಿ ಕೂರಿಸಿ ಕಂಟ್ರಾಕ್ಟರ್​ಗೆ ಕಸದ ಅಭಿಷೇಕ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − one =
Remember me
