ತಮಿಳುನಾಡು:  ಗುಂಪುಗಳ ನಡುವೆ ಹಿಂಸಾಚಾರಕ್ಕೆ ಉತ್ತೇಜಿಸಿದ ಮತ್ತು ವೈರತ್ವವನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗೆ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. ವಲಸೆ ಕಾರ್ಮಿಕರ ಸಮಸ್ಯೆಯ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಅಣ್ಣಾಮಲೈ, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಅದರ ಮೈತ್ರಿ ಪಕ್ಷದ ನಾಯಕರು ಅವರ ಮೇಲಿನ ದ್ವೇಷಕ್ಕೆ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.
ಕೆ.ಅಣ್ಣಾಮಲೈ ಅವರ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೈಬರ್ ಕ್ರೈಂ ವಿಭಾಗವು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಇತರ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಸೆಕ್ಷನ್‌ಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಕೈಲಾಸ’ದಲ್ಲಿ ಉಚಿತ ಇ-ಪೌರತ್ವಕ್ಕಾಗಿ ಜನರನ್ನು ಆಹ್ವಾನಿಸಿದ ನಿತ್ಯಾನಂದ!
ವಲಸಿಗ ಕಾರ್ಮಿಕರು ತಮಿಳುನಾಡಿನಲ್ಲಿ ಸುರಕ್ಷಿತರಾಗಿದ್ದಾರೆ. ಆದರೆ ಸಿಎಂ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಹಾಗೂ ಅದರ ಮಿತ್ರ ಪಕ್ಷದ ನಾಯಕರು ಅವರ ವಿರುದ್ಧದ ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಕೆ ಅಣ್ಣಾಮಲೈ ಅವರು ಶನಿವಾರ ಹೇಳಿಕೆ ನೀಡಿದ್ದರು.
ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿಗಳು ನಡೆಯುತ್ತಿವೆ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನೋವುಂಟುಮಾಡುತ್ತಿದೆ. ನಾವು, ತಮಿಳಿಗರು ‘ಜಗತ್ತು ಒಂದೇ’ ಎಂಬ ಪರಿಕಲ್ಪನೆಯಲ್ಲಿ ನಂಬಿಕೆ ಹೊಂದಿರುವವರು. ನಾವು ಪ್ರತ್ಯೇಕತಾವಾದವನ್ನು ಒಪ್ಪುವುದಿಲ್ಲ ಮತ್ತು ನಮ್ಮ ಉತ್ತರ ಭಾರತದ ಸ್ನೇಹಿತರ ಮೇಲಿನ ಹೇಯ ದ್ವೇಷಗಳನ್ನು ಅನುಮೋದಿಸುವುದಿಲ್ಲ” ಎಂದು ಸರಣಿ ಟ್ವೀಟ್‌ಗಳಲ್ಲಿ ಅಣ್ಣಾಮಲೈ ಹೇಳಿದ್ದರು.
ಇದನ್ನೂ ಓದಿ:ಪಾತ್ರೆ ತೊಳೆಯುತ್ತಿರುವಾಗ ಮೈ ಮೇಲೆ ಎಗರಿದ ಕೋತಿಗಳ ಹಿಂಡು; 70 ವರ್ಷದ ವೃದ್ಧೆ ನಿಧನ
ಇದೇ ವೇಳೆ ಅವರು ಡಿಎಂಕೆ ನಾಯಕರು ಉತ್ತರ ಭಾರತೀಯರ ಮೇಲೆ ನಡೆಸಿದ್ದ ವಾಗ್ದಾಳಿಯನ್ನು ಪ್ರಸ್ತಾಪಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. “ಡಿಎಂಕೆ ಸಂಸದರು ಉತ್ತರ ಭಾರತೀಯರ ಮೇಲೆ ಕೆಟ್ಟ ಹೇಳಿಕೆಗಳನ್ನು ನೀಡಿದ್ದಾರೆ. ಡಿಎಂಕೆ ಸಚಿವರೊಬ್ಬರು ಅವರನ್ನು ಪಾನಿಪುರಿವಾಲಾಗಳೆಂದು ಕರೆಯುತ್ತಾರೆ. ಅವರ ಮೈತ್ರಿ ಪಾಲುದಾರರು ಅವರನ್ನು ಹೊರಗಟ್ಟಬೇಕೆಂದು ಸಲಹೆ ನೀಡುತ್ತಾರೆ. ಇದರ ಫಲಿತಾಂಶವೇ ನಾವು ಇಂದು ನೋಡುತ್ತಿರುವ ಸ್ಥಿತಿ” ಎಂದು ಅಣ್ಣಾಮಲೈ ಆರೋಪಿಸಿದ್ದರು.
2 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿಗಳು ವಿಮಾನದ ಶೌಚಾಲಯದಲ್ಲಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
