ತೆಲಂಗಾಣ:ಕಾಲೇಜ್ ಕ್ಯಾಂಪಸ್​ ಮತ್ತು ಹಾಸ್ಟೆಲ್​ನಲ್ಲಿ ಹೊಡೆದಾಡಿ, ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಂಡಿ ಸಂಜಯ್ ಮಗ ಭಗೀರಥ್​​ನ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.
ಬಂಡಿ ಸಂಜಯ್ ಮಗ ಭಗೀರಥ್​ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈತನ ವರ್ತನೆಯ ಬಗ್ಗೆ ಎಲ್ಲರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ತೆಲಂಗಾಣದ ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
Case filed against Bandi Sai Bhageerath after a complaint from college authorities. He's the son of Telangana BJP chief Bandi Sanjay. We took up investigation. Notice will be served: Telangana Police senior official on viral video of Bandi Sai Bhageerath beating a fellow studentpic.twitter.com/gsZ8HNgo93— ANI (@ANI)January 18, 2023
Case filed against Bandi Sai Bhageerath after a complaint from college authorities. He's the son of Telangana BJP chief Bandi Sanjay. We took up investigation. Notice will be served: Telangana Police senior official on viral video of Bandi Sai Bhageerath beating a fellow studentpic.twitter.com/gsZ8HNgo93
ವೈರಲ್ ಆಗಿರುವ ವಿಡಿಯೋದಲ್ಲಿ, ಭಗೀರಥ್ ಹಲ್ಲೆ ಮಾಡಿ ವಿದ್ಯಾರ್ಥಿಯ ಕೆನ್ನೆಗೆ ಬಾರಿಸಿರುವುದನ್ನು ಗಮನಿಸಬಹುದು. ಹಲ್ಲೆ ಮಾಡಿ ವಿದ್ಯಾರ್ಥಿಯನ್ನು ಕೊಲೆ ಮಾಡುವುದಾಗಿ ಭಗೀರಥ್ ಬೆದರಿಕೆ ಹಾಕಿದ್ದಾನೆ. ಘಟನೆಯ ಸಂಬಂಧ ಒಟ್ಟು ಎರಡು ವಿಡಿಯೋಗಳು ವೈರಲ್ ಆಗಿದ್ದು, ಎರಡನೇ ವಿಡಿಯೋದಲ್ಲಿ ಭಗೀರಥ್ ಗುಂಪು ಕಟ್ಟಿಕೊಂಡು ಹಾಸ್ಟೆಲ್​ ಕೋಣೆಯೊಳಗೆ ನುಗ್ಗಿ ಹಲ್ಲೆ ಮಾಡಿರುವುದು ಕಂಡು ಬಂದಿದೆ.
ಘಟನೆಯ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಕಾಲೇಜಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ನಡೆಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ಕೃತ್ಯ ಎಸಗಿರುವುದು ಸಂಸದರ ಪುತ್ರ ಎಂಬುದು ಪೊಲೀಸರಿಗೆ ಖಚಿತವಾಗಿದೆ. ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಕ್ಕಾಗಿ ಸಂಸದರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಭಗೀರಥ್​ ಮೇಲೆ 341, 323, 504, ಮತ್ತು 506 r/w 34 ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 3 =
Remember me
