ಮಹಾರಾಷ್ಟ್ರ:ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಆಲದಕಟ್ಟಿ ಬಳಿ ಬೃಹತ್ ಪಟಾಕಿ ಗೋಡೌನ್ ಗೆ ಬೆಂಕಿ !
ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನಕ್ಕೆ ವ್ಯಕ್ತಿಯ ವಿರುದ್ಧ ಇದೀಗ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಆಗಸ್ಟ್​ 28) ಮಾಹಿತಿ ನೀಡಿದ್ದಾರೆ. ಡೊಂಬಿವಲಿಯ ವ್ಯಕ್ತಿಯೊಬ್ಬರು ಪೊಲೀಸ್ ದೂರಿನಲ್ಲಿ, “ಕಳೆದ ವರ್ಷ ಉಲ್ಲಾಸನಗರ ಪ್ರದೇಶದ ವ್ಯಕ್ತಿ, ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಕ್ರಾಪ್​ ಮಾಡಿದ ಚಿತ್ರವನ್ನು ತನ್ನ ಕಾಲಿನ ಮೇಲೆ ಇರಿಸಿರುವ ಫೋಟೋ ಪೋಸ್ಟ್ ಮಾಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಪ್ರಯಾಗ್‌ರಾಜ್​​​​ನಲ್ಲಿ ವಿದ್ಯಾರ್ಥಿ ಹತ್ಯೆ ಪ್ರಕರಣ: ಎಸ್‌ಎಚ್‌ಒ ಅಮಾನತು, ಐವರ ಬಂಧನ
ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ದೂರುದಾರರು ದೂರಿನಲ್ಲಿ ಹೇಳಿದ್ದು, ದೂರಿನ ಆಧಾರದ ಮೇರೆಗೆ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ 1971ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ,(ಏಜೆನ್ಸೀಸ್).
ಎನ್‌ಟಿಆರ್‌ಗೆ ಭಾರತ ರತ್ನ ಕೊಡಬೇಕು; ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ನಿರ್ದೇಶಕ ರಾಘವೇಂದ್ರ ರಾವ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
