ತಿರುವನಂತಪುರಂ:ಪುಷ್ಪಾ -2 ವಿಲನ್ ಗೆ ಕಾನೂನು ಕಂಟಕ ಎದುರಾಗಿದೆ. ಆಸ್ಪತ್ರೆಯೊಂದರಲ್ಲಿ ಕಾನೂನು ಬಾಹೀರವಾಗಿ ಚಿತ್ರೀಕರಣ ನಡೆಸಿದ ಸಂಬಂಧ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಈ ಕುರಿತು ಚಿತ್ರತಂಡ ಪ್ರತಿಕ್ರಿಯೆ ನೀಡಿದೆ.
ಇದನ್ನೂ ಓದಿ:EPFO: ಪಿಎಫ್​ ಖಾತೆದಾರರಿಗೆ ಶುಭ ಸುದ್ದಿ.. ಖಾತೆಗೆ ಬಡ್ಡಿ ಹಣ ಜಮೆ!
ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಫಹದ್ ಫಾಜಿಲ್ ಒಳ್ಳೆಯ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ. ಈ ನಡುವೆ ಅವರು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು ಗೊತ್ತೇ ಇದೆ. ಈ ನಟನ ವಿರುದ್ಧ ಕೇರಳ ಮಾನವ ಹಕ್ಕುಗಳ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಜತೆಗ ಅವರ ವಿರುದ್ಧ ಸುಮೋಟೋ ಪ್ರಕರಣವೂ ದಾಖಲಾಗಿದೆ.
ಮಲಯಾಳಂ ಚಿತ್ರರಂಗದಲ್ಲಿ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳುವ ಫಹಾದ್ ಫಾಜಿಲ್ ಮಲಯಾಳಂ ಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಗುರುವಾರ ರಾತ್ರಿ ಎರ್ನಾಕುಲಂ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಅಲ್ಲಿನ ರೋಗಿಗಳು ಪರದಾಡಿದ್ದಾರೆ ಎಂದು ವರದಿಯಾಗಿದೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಸಾಮಾನ್ಯ ರೋಗಿಗಳನ್ನು ಸಹ ಅನುಮತಿಸಲಾಗುವುದಿಲ್ಲ. ಇಂತಹ ಕಡೆ ಶೂಟಿಂಗ್ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಇದು ಉನ್ನತ ಅಧಿಕಾರಿಗಳ ಗಮನಕ್ಕೆ ಹೋಗಿತ್ತು. ಈ ಬಗ್ಗೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಬೀನಾ ಕುಮಾರಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಆದೇಶಿಸಿದ್ದಾರೆ.
ಒಂದೆಡೆ ರೋಗಿಗಳ ಚಿಕಿತ್ಸೆ ನಡೆಯುತ್ತಿದ್ದರೆ ಮತ್ತೊಂದೆಡೆ ರಾತ್ರಿಯಿಡೀ ಆಸ್ಪತ್ರೆಯಲ್ಲಿ ಚಿತ್ರತಂಡ ಗಲಾಟೆ ಮಾಡಿದೆ ಎನ್ನುತ್ತಾರೆ ರೋಗಿಗಳು.
ಆದರೆ ಈ ಆರೋಪಗಳನ್ನು ಚಿತ್ರತಂಡ ತಳ್ಳಿಹಾಕಿದೆ. ಚಿತ್ರೀಕರಣಕ್ಕಾಗಿ ಆಸ್ಪತ್ರೆಯವರಿಗೆ 10ಸಾವಿರ ರೂ. ಸಂಭಾವನೆ ಪಡೆದಿರುವುದಾಗಿ ಬಹಿರಂಗಪಡಿಸಿದ್ದಾರೆ. ಆದರೆ, ಕೇರಳ ಹ್ಯೂಮನ್ ರೈಟ್ಸ್ ಅಸೋಸಿಯೇಷನ್ ನ ಮುಖಂಡ ಫಹಾದ್ ಫಾಜಿಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಫಹಾದ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನಿಗೆ ಮಚ್ಚು ತೋರಿಸಿದ ಆಟೋ ಚಾಲಕ..ಬಳಿಕ ನಡೆದಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
