ಲಖನೌ:ಕರೊನಾ ತಡೆಗಟ್ಟುವ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದವು. ಲಾಕ್​ಡೌನ್​ ವೇಳೆ ಹೊರಗಡೆ ಸುತ್ತಾಡಿ, ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣಗಳನ್ನೂ ದಾಖಲಿಸಿಕೊಳ್ಳಲಾಗಿತ್ತು. ರಾಜ್ಯದ ಸಾಮಾನ್ಯ ವರ್ಗದ ಜನರ ಹಿತದೃಷ್ಟಿಯಿಂದಾಗಿ ಇದೀಗ ಯೋಗಿ ಆದಿತ್ಯಾನಾಥ ಸರ್ಕಾರವು ಲಾಕ್​ಡೌನ್​ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರ ಮಾಡಿದೆ.
ಇದನ್ನೂ ಓದಿ:“ಇಡೀ ಕೃಷಿ ವ್ಯವಹಾರವನ್ನು ಇಬ್ಬರು ಮಿತ್ರರಿಗೆ ಕೊಡಲಿದ್ದಾರೆ ಮೋದಿ” : ರಾಹುಲ್ ಗಾಂಧಿಲಾಕ್​ಡೌನ್​ ಸಮಯದಲ್ಲಿ ಪೆಂಡಮಿಕ್​ ಕಾಯ್ದೆ ಜಾರಿಯಲ್ಲಿತ್ತು. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಸೆಕ್ಷನ್​ 188 ರಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಉತ್ತರ ಪ್ರದೇಶ ರಾಜ್ಯವೊಂದರಲ್ಲೇ ಸುಮಾರು 2.5 ಲಕ್ಷ ಜನರ ವಿರುದ್ಧ ಲಾಕ್​ಡೌನ್​ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಅವರೆಲ್ಲರೂ ಕೋರ್ಟ್​, ಪೊಲೀಸ್​ ಠಾಣೆಗೆ ಓಡಾಡುವ ಸ್ಥಿತಿ ಬಂದೊದಗಿತ್ತು. ಅವರಲ್ಲಿ ಸಣ್ಣ ಪುಟ್ಟ ವ್ಯಾಪಾರಿಗಳು ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಿದ್ದಾರೆ.
ಮೊದಲೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಕುಟುಂಬಗಳಿಗೆ ಇದೀಗ ಈ ಪ್ರಕರಣದಿಂದಾಗಿ ಇನ್ನಷ್ಟು ಹೊರೆ ಮಾಡುವುದು ಬೇಡವೆಂದು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದೇ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.ಲಾಕ್​ಡೌನ್​ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಹಿಂಪಡೆದಿರುವ ಮೊದಲ ರಾಜ್ಯವಾಗಿ ಉತ್ತರ ಪ್ರದೇಶ ಹೊರಹೊಮ್ಮಿದೆ. ಉತ್ತರ ಪ್ರದೇಶದಂತೆಯೇ ಬೇರೆ ರಾಜ್ಯಗಳೂ ಮಹತ್ತರ ನಿರ್ಧಾರ ತೆಗೆದುಕೊಳ್ಳಲಿವೆಯೇ ಎನ್ನುವುದನ್ನು ಕಾದು ನೋಡಬೇಕು. (ಏಜೆನ್ಸೀಸ್​)
ಹೆಂಡತಿ ನೋಡಲು ದೂರದ ಊರಿಂದ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹಿಂಬದಿ ಬಾಗಿಲಿಂದ ಬಂದವ ಹೀಗೇಕೆ ಮಾಡಿದ?

ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​! ಚಿನ್ನದ ದರದಲ್ಲಿ ಮತ್ತೆ ಇಳಿಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 + 6 =
Remember me
