ಭೋಪಾಲ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮ್ಲಲಿಕಾರ್ಜುನ ಖರ್ಗೆ ಹರಿಹಾಯ್ದಿದ್ದಾರೆ. ಮಣಿಪುರದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ ಬಿಜೆಪಿ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಲ್ಲಿ ಜಾತಿ ಸಮೀಕ್ಷೆ ಮಾಡಿಸಲಾಗುವುದು ಎಂದಿದ್ದಾರೆ.
ಕೆಲವರು ಅಧಿಕಾರದಲ್ಲಿದ್ದೇವೆ ಎಂದು ದೇಶದ ಸಂವಿಧಾನವನ್ನು ಬದಲಾಯಿಸಲು ಹೊರಟ್ಟಿದ್ದಾರೆ. ದೇಶದ ಜನತೆ ಸಂವಿಧಾನಕ್ಕೆ ಬೆಂಬಲ ಸೂಚಿಸುತ್ತಿರುವುದರಿಂದ ಇದು ಸಾಧ್ಯವಾಗಿಲ್ಲ. ಬಿಜೆಪಿಯವರಿಗೆ ಚುನಾವಣೆ ಸಮಯದಲ್ಲಿ ಮಾತ್ರ ಎಸ್​ಸಿ/ಎಸ್​ಟಿ ಸಮುದಾಯದ ಜನ ನೆನಪಾಗುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಅಪ್ರಾಪ್ತ ವಯಸ್ಕಳ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ ದುರುಳರು
ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಶಿವರಾಜ್​ ಸಿಂಗ್​ ಚೌಹಾಣ್​ 18 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಅವರಿಗೆ ಚುನಾವಣೆ ಹೊಸ್ತಿಲಲ್ಲಿ ಎಸ್​ಸಿ ಸಮುದಾಯದ ಪೂಜ್ಯ ಗುರುಗಳಾದ ಸಂತ ರವಿದಾಸ್​ ಅವರು ನೆನಪಾಗಿದ್ದಾರೆ. ಇದೇ ಬಿಜೆಪಿಯವರು ದೆಹಲಿಯಲ್ಲಿರುವ ಸಂತ ರವಿದಾಸ್​ ಅವರ ದೇವಾಲಯವನ್ನು ಹೊಡೆದು ಹಾಕಿದ್ದಾರೆ. ಆದರೆ, ಮಧ್ಯಪ್ರದೇಶದಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ದೇವಾಲಯ ಕಟ್ಟುವುದಾಗಿ ಘೊಷಿಸಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಣಿಪುರದಲ್ಲಿ ಸಂಭವಿಸಿದ ಘರ್ಷಣೆ ಕುರಿತು ಯಾಕಿಷ್ಟು ಮೌನ ವಹಿಸಿದ್ದಾರೆ ಎಂಬುದು ನನಗೆ ಅರ್ಥವಾಗಿಲ್ಲ. ಘರ್ಷಣೆ ನಿಲ್ಲಿಸಲು ಪ್ರಧಾನಿ ಮೋದಿ ಯಾವ ಕ್ರಮವನ್ನು ಸಹ ಕೈಗೊಂಡಿಲ್ಲ. ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕಷ್ಟಗಳನ್ನು ಅರಿಯಲು ಹೋದ ನಮ್ಮ ಪಕ್ಷದ ನಾಯಕರನ್ನು ಸಹ ತಡೆಯಲಾಯಿತು ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 16 =
Remember me
