ಕಲ್ಕತ್ತಾ:ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 25ಕ್ಕೂ ಹೆಚ್ಚು ಮಂದಿ ದೃಷ್ಠಿ ಕಳೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ರಾಜದಾನಿ ಕಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ ಶುಕ್ರವಾರ (ಜೂನ್ 28) ಹಾಗೂ ಶನಿವಾರದಂದು (ಜೂನ್​ 29) ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, 25 ಮಂದಿಗೆ ದೃಷ್ಟಿದೋಷ ಉಂಟಾಗಿದೆ ಎನ್ನಲಾಗಿದೆ. ಈ ಸಂಬಂಧ ಸರ್ಕಾರ ತನಿಖೆಗೆ ಆದೇಶಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ತುರ್ತ ಸಭೆ ಕರೆದಿದೆ.
ಇದನ್ನೂ ಓದಿ:ವಿಜಯೋತ್ಸವದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ವಿರಾಟ್​ ಕೊಹ್ಲಿ!; ವಿಡಿಯೋ ವೈರಲ್​
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಸೋಂಕು ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸೋಂಕಿನ ಮೂಲವನ್ನು ಕಂಡು ಹಿಡಿಯಲು ಶಸ್ತ್ರಚಿಕಿತ್ಸೆಗೆ ಬಳಸಲಾದ ಉಪಕರಣಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸೋಂಕಿನ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನಾವು ಸದ್ಯಕ್ಕೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಲ್ಲಿಸಿದ್ದೇವೆ.
ಫಂಗಸ್‌ನಿಂದ ಸೋಂಕು ಉಂಟಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ರೋಗಿಯ ಕಣ್ಣಿನಲ್ಲಿ ಶಿಲೀಂಧ್ರ ಸೋಂಕು ಹೇಗೆ ಕಾಣಿಸಿಕೊಂಡಿತು ಎಂಬುದು ನಮಗೆ ತಿಳಿದಿಲ್ಲ. ಸೋಂಕಿನ ಮೂಲವು ಶಸ್ತ್ರಚಿಕಿತ್ಸೆಯ ಡ್ರಾಪ್ಸ್​ ಅಥವಾ ವೈದ್ಯಕೀಯ ಸಾಧನವಾಗಿರಬಹುದು ಎಂದು ಊಹಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − five =
Remember me
