ಭೋಪಾಲ್​:ಮಹಿಳೆಯರಿಗೆ ಮೀಸಲಿರುವ ಆಸನದಲ್ಲಿ ಕೂರಬೇಡಿ ಎಂದಿದ್ದಕ್ಕೆ ಯುವಕರಿಬ್ಬರು ಚಾಲಕ ಹಾಗೂ ನಿರ್ವಾಹಕನಿಗೆ ಮನಬಂದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಬಸ್​ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ನೀಲ್​ಬಾದ್​ನಿಂದ ಸೂರಜ್​ನಗರಕ್ಕೆ ಬಸ್​ ಸಂಚರಿಸಲಿದ್ದು, ಹಲ್ಲೆ ಮಾಡಿದವರ ಪೈಕಿ ಓರ್ವ ಮಹಿಳೆಯರ ಸೀಟಿನಲ್ಲಿ ಕುಳಿತುಕೊಂಡಿದ್ದ. ಇದನ್ನು ಗಮನಿಸಿದ ಚಾಲಕ ಕೃಷ್ಣಪಾಲ್​ ಸಿಂಗ್​ ಆತನಿಗೆ ಮಹಿಳೆಯರಿಗೆ ಮೀಸಲಿರುವ ಆಸನ ಬಿಟ್ಟು ಹಿಂಬಿದ ಹೋಗಿ ಕೂರುವಂತೆ ಸೂಚಿಸಿದ್ದಾರೆ.
View this post on InstagramA post shared by ND_News_Bhopal (@nd_news_bhopal)

A post shared by ND_News_Bhopal (@nd_news_bhopal)
ಇದನ್ನೂ ಓದಿ:ಬಿಸಿಸಿಐನ ಈ ನಡೆಯಿಂದ ತುಂಬಾ ನೋವಾಗಿದೆ; ಮಾಜಿ ಕ್ರಿಕೆಟಿಗ ಕಪಿಲ್​ ದೇವ್​ ಹೀಗಂದಿದ್ಯಾಕೆ
ಇದಾದ ಬಸ್​ನಿಂದ ಇಳಿದ ಆರೋಪಿಯು ಬಳಿಕ ತನ್ನ ಸ್ನೇಹಿತನೊಂದಿಗೆ ಪಾನಮತ್ತನಾಗಿ ಬಂದು ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರನ್ನು ಚಿಂಟು ಮತ್ತು ಅಂಕುಶ್​ ಎಂದು ಗುರುತಿಸಲಾಗಿದ್ದು, ಇವರು ನಹೆರು ಕಾಲೋನಿಯ ಹೊಸ ಮಾರ್ಕೆಟ್​ ನಿವಾಸಿಗಳೆಂದು ತಿಳಿದು ಬಂದಿದೆ. ಹಲ್ಲೆಯಿಂದ ಚಾಲಕನ ಮೂಗಿಗೆ ಗಾಯವಾಗಿದ್ದು, ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡುವುದಕ್ಕೂ ಮುನ್ನ ಆರೋಪಿಗಳಿಬ್ಬರು ತಮ್ಮ ಮನೆಯ ಬಳಿ ಇದ್ದ ವಾಹನಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೆ ಹಾನಿ ಮಾಡಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ ದೂರು ದಾಖಲಿಸಲಾಗಿದ್ದು, ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + eleven =
Remember me
