ಹುಬ್ಬಳ್ಳಿ:ಗೋವಾದಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಕಲ್​ ಸವಾರಿ ಮಾಡುತ್ತಿರುವ ವಿಡಿಯೋ ಭಾರಿ ವೈರಲ್​ ಆಗಿದೆ.
ಇಂದು ಬೆಳಗ್ಗೆ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್‌ನ ಆವರಣದಲ್ಲಿ ಸೈಕಲ್ ಸವಾರಿ ಮಾಡಿದ್ದು, ಆ ದೃಶ್ಯವನ್ನು ಕಾಂಗ್ರೆಸ್​ ಮುಖಂಡ ರಜತ ಉಳ್ಳಾಗಡ್ಡಿ ಮಠ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ:ಜೋಡೆತ್ತುಗಳಿಂದ 14 ಟನ್ ಕಬ್ಬು ತುಂಬಿದ್ದ ಗಾಡಿ ಎಳೆಸಿ ಸಂಕಷ್ಟಕ್ಕೆ ಸಿಲುಕಿದ ಯುವಕರು..!
ಸೋನಿಯಾ ಗಾಂಧಿ ಅವರು ಕೆಲ ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿರುವ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದ್ದು, ಆರೋಗ್ಯ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ತಮ್ಮ ಪುತ್ರ ರಾಹುಲ್​ ಗಾಂಧಿ ಜತೆಯಲ್ಲಿ ಗೋವಾದಲ್ಲಿ ಉಳಿದುಕೊಂಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ತಗ್ಗುವವರೆಗೂ ಅವರು ದೆಹಲಿಗೆ ಮರಳುವುದಿಲ್ಲ ಎಂದು ಕೆಲ ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಅವರ ಸೈಕಲಿಂಗ್ ವರ್ಕೌಟ್ ವಿಡಿಯೋ ವೈರಲ್​ ಆಗುತ್ತಿದೆ.
ಗೋವಾದಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಕಲ್​ ಸವಾರಿ ಮಾಡುತ್ತಿರುವ ವಿಡಿಯೋ ಭಾರಿ ವೈರಲ್​ ಆಗಿದೆ.#SoniaGandhi#Congress#Goa#Cyclepic.twitter.com/S8XqtMhh59
— Vijayavani (@VVani4U)November 25, 2020

ದೆಹಲಿಯಿಂದ ಗೋವಾಕ್ಕೆ ಹಾರಿದ ಸೋನಿಯಾ, ರಾಹುಲ್​; ಕಾರಣವೇನು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + four =
Remember me
