ಮುಂಬೈ :ಲಂಚ ಪಡೆಯುತ್ತಾ ರೆಡ್​ ಹಾಂಡೆಡ್​ ಆಗಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯೊಬ್ಬ ಎಸಿಬಿ ಅಧಿಕಾರಿಗಳಿಗೆ ಪಿಸ್ತೂಲ್ ತೋರಿಸಿ ಹಣ ಎತ್ತಿಕೊಂಡು ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಿಂದ ವರದಿಯಾಗಿದೆ. ರಾಜ್ಯದ ರಾಯಗಡ ಜಿಲ್ಲೆಯ ಮಾನ್​ಗಾವ್​ ಠಾಣೆ ಸಬ್​ಇನ್ಸ್​ಪೆಕ್ಟರ್ ಗಣೇಶ್ ಕಂಡೇಕರ್ ಎಂಬುವರೇ ಹೀಗೆ ಓಡಿಹೋಗಿರುವ ಪೊಲೀಸ್!
ಠಾಣೆಯಲ್ಲಿ ದೂರು ಸ್ವೀಕರಿಸಲು 50 ಸಾವಿರ ರೂಪಾಯಿ ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಮೇರೆಗೆ ಆ್ಯಂಟಿ ಕರಪ್ಷನ್ ಬ್ಯೂರೋ(ಎಸಿಬಿ) ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದರು. ಬುಧವಾರ ಬೆಳಿಗ್ಗೆ 11.30 ರ ಸುಮಾರಿಗೆ ಜಾಲ ಬೀಸಿದಾಗ, ಎಸ್​ಐ ಕಂಡೇಕರ್ ದೂರು ಸ್ವೀಕರಿಸಲು 25,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಾಕ್ಷಿ ಸಮೇತ ಹಿಡಿಯಲು ಮುಂದಾದರು.
ಇದನ್ನೂ ಓದಿ:ಆಸ್ಪತ್ರೆಯ ಡ್ರೆಸ್ ಚೇಂಜಿಂಗ್ ರೂಮಲ್ಲಿ ಕ್ಯಾಮೆರಾ! ಮೊಬೈಲ್ ಚಾರ್ಜ್​ಗೆ ಹಾಕಿ ರೆಕಾರ್ಡಿಂಗ್!
ಎಚ್ಚೆತ್ತುಕೊಂಡ ಕಂಡೇಕರ್, ಎಸಿಬಿಯ ಇನ್ಸ್​ಪೆಕ್ಟರ್ ಮತ್ತು ಪೇದೆ ಅವರನ್ನು ಬಂಧಿಸಲು ಹೋದಾಗ ತಮ್ಮ ಸರ್ವೀಸ್ ಪಿಸ್ತೋಲನ್ನು ತೋರಿಸಿದ್ದಾರೆ. ನಂತರ ಪೇದೆಗೆ ಬೈಕ್​ನಿಂದ ಗುದ್ದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎಸಿಬಿ ಪೇದೆಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಗಡ ಎಸಿಬಿಯು ಪ್ರಕರಣ ದಾಖಲಿಸಿದ್ದು, ಪರಾರಿಯಾಗಿರುವ ಎಸ್​ಐ ಗಣೇಶ್ ಕಂಡೇಕರ್ ಅವರ ಪತ್ತೆ ಕಾರ್ಯ ಆರಂಭವಾಗಿದೆ.(ಏಜೆನ್ಸೀಸ್)
‘ರಾಜ್ಯದ ಜನತೆ ಸಂಕಷ್ಟದಲ್ಲಿದಾರೆ, ದಿಕ್ಕು ತಪ್ಪಿಸಬೇಡಿ’ : ಸಿಡಿ ಲೇಡಿಗೆ ಎಚ್​ಡಿಕೆ ಸಲಹೆ

ಯಾರೀ ಮತ್ಸ್ಯಕನ್ಯೆ ? ಮತ್ತೊಮ್ಮೆ ನೋಡಿ…

“ಹಿಂದೆ ಮಹಿಳೆಯರ ಸೊಂಟ ನಂಬರ್ 8 ರಂತೆ ಇರುತ್ತಿತ್ತು, ಈಗ ಡ್ರಮ್ಮಿನಂತಾಗಿದ್ದಾರೆ” ಎಂದ ಡಿಎಂಕೆ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 9 =
Remember me
