ನವದೆಹಲಿ:ಕರ್ನಾಟಕ ನಿಗದಿತ ಪ್ರಮಾಣದಲ್ಲಿ ನೀರನ್ನು ತಮಿಳುನಾಡಿಗೆ ಬಿಟ್ಟಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದ್ದಾರೆ.
ನ್ಯಾ.ಬಿ.ಆರ್‌.ಗವಾಯಿ, ನ್ಯಾ.ಪಿ.ಎಸ್‌.ನರಸಿಂಹ ಮತ್ತು ನ್ಯಾ.ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ತ್ರಿಸದಸ್ಯ ಪೀಠದ ಸದಸ್ಯರಾಗಿದ್ದಾರೆ. ಶುಕ್ರವಾರದಂದು (ಆ.25) ಈ ನ್ಯಾಯಪೀಠ ಕಾವೇರಿ ವಿವಾದದ ಬಗ್ಗೆ ಎರಡೂ ರಾಜ್ಯಗಳ ವಾದವನ್ನು ಆಲಿಸಲಿದೆ.
ಇದನ್ನೂ ಓದಿ:ಕಾವೇರಿದ ಸಂಘರ್ಷ ಸವಾಲು: ವಿಚಾರಣೆಗೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ, ನಾಳೆ ಸರ್ವಪಕ್ಷ ಸಭೆ ಬಳಿಕ ರಾಜ್ಯದ ಮುಂದಿನ ನಡೆ ನಿರ್ಧಾರ
ಸೋಮವಾರ ತಮಿಳುನಾಡು ಅರ್ಜಿ ಬಗ್ಗೆ ಪ್ರಸ್ತಾಪಿಸಿದ್ದ ವಕೀಲ ಮುಕುಲ್‌ ರೋಹಟ್ಗಿ, ಈ ಬಗ್ಗೆ ತುರ್ತು ವಿಚಾರಣೆ ಆಗಬೇಕು ಮತ್ತು ಇದಕ್ಕಾಗಿ ಸುಪ್ರೀಂಕೋರ್ಟ್‌ ನ್ಯಾಯಪೀಠ ರಚನೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿಜೆಐ, ನ್ಯಾಯಪೀಠ ರಚನೆ ಮಾಡಿ ವಿಚಾರಣೆಗೆ ಪ್ರಕರಣವನ್ನು ಶೀಘ್ರದಲ್ಲಿ ಪಟ್ಟಿ ಮಾಡಲಾಗುವುದು ಎಂದು ಹೇಳಿದ್ದರು.
ಟ್ರೋಲ್ ಮಾಡುವವರಿಗೆ ಗೊತ್ತಿರುವುದು ಒಂದೇ ಚಾಯ್​ವಾಲಾ: ನಟ ಪ್ರಕಾಶ್ ರಾಜ್​

ನಾಗರಹಾವಿನ ಮುಂದೆ ಕೇಕ್ ಇಟ್ಟು ‘ಹ್ಯಾಪಿ ಬರ್ತ್​ಡೇ’ ಎಂದು ಪಂಚಮಿ ಆಚರಿಸಿದ ಯುವಕರ ದಂಡು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 5 =
Remember me
