ಪಶ್ಚಿಮ ಬಂಗಾಳ:ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ವೈದ್ಯಕೀಯ ಸಿಬ್ಬಂದಿ, ಆರೋಪಿಗಳ ವಿರುದ್ಧದ ಹೋರಾಟವನ್ನು ನಿರಂತರವಾಗಿ ಮುಂದುವರೆಸಿದ್ದರು. ಆಗಸ್ಟ್​ 16ರಂದು 24 ಗಂಟೆಗಳ ಕಾಲ ದೇಶವ್ಯಾಪಿ ಮೆಡಿಕಲ್ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಯನ್ನು ಒತ್ತಿ ಹೇಳಿದ್ದ ಮಹಿಳಾ ವೈದ್ಯರು, ಇದೀಗ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಗ್ರಾಪಂ ಸದಸ್ಯರಿಗೆ ಗೌರವಧನ ಹೆಚ್ಚಿಸಿ
ಅತ್ಯಾಚಾರಿ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು, ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ತನಿಖೆ ಚುರುಕಿನಿಂದ ಸಾಗಬೇಕು ಎಂಬ ಕೂಗು ದೇಶವ್ಯಾಪಿ ಕೇಳಿಬಂದಿತ್ತು. ಇದೆಲ್ಲದರ ನಡುವೆ ನಿನ್ನೆ (ಸೆ.02) 15 ದಿನಗಳ ನಿರಂತರ ವಿಚಾರಣೆ ಬಳಿಕ ಸಿಬಿಐ, ಆರ್​ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್​ ಘೋಷ್​​ನನ್ನು ಬಂಧಿಸಿದೆ.
ಆ.14ರಂದು ಸಿಬಿಐಗೆ ವಹಿಸಿದ ಕೊಲ್ಕತ್ತಾ ಹೈಕೋರ್ಟ್​, ತನಿಖೆಯನ್ನು ಚುರುಕುಗೊಳಿಸುವಂತೆ ಆದೇಶಿಸಿತು. ಅದರ ಅನ್ವಯ ಆರ್​ಜಿ ಕರ್​ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್​ನನ್ನು ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಸತತ 15 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಇದೀಗ ಆರೋಪಿ ಸಂದೀಪ್​ನನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಪಿಎಸ್​ಐ ಪರೀಕ್ಷೆ ಜೀನ್ಸ್ ಪ್ಯಾಂಟ್ ನಿಷೇಧ: ಸರಳ ಉಡುಗೆಗೆ ಆದ್ಯತೆ ನೀಡುವಂತೆ ಕೆಇಎ ಸಲ
ಸಂದೀಪ್ ಘೋಷ್ ಜತೆ ಅದೇ ಆರ್‌ಜಿ ಕರ್‌ ಕಾಲೇಜಿನಲ್ಲಿ ಸೆಕ್ಯೂರಿಟಿ ಆಫೀಸರ್​ ಆಗಿ ಕೆಲಸ ಮಾಡುತ್ತಿದ್ದ ಅಫ್ಸರ್ ಅಲಿ ಖಾನ್ ಹಾಗೂ ಆಸ್ಪತ್ರೆಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬಿಪ್ಲಬ್ ಸಿಂಗ್ ಮತ್ತು ಸುಮನ್ ಹಜ್ರಾರನ್ನು ಕೂಡ ಸಿಬಿಐ ಬಂಧಿಸಿದೆ. ಮೃತ ವಿದ್ಯಾರ್ಥಿನಿ ಹಾಗೂ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಿಕೊಡಿ, ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಮೂಲಕ ಆಕೆಯ ಪೋಷಕರ ಕಣ್ಣೀರು ಒರೆಸಿ ಎಂದು ಆಸ್ಪತ್ರೆಯ ಜೂನಿಯರ್​ ಡಾಕ್ಟರ್​ಗಳು ಆಗ್ರಹಿಸಿದ್ದಾರೆ,(ಏಜೆನ್ಸೀಸ್).
14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
