ನವದೆಹಲಿ:ವೈದ್ಯಕೀಯ ಕೋರ್ಸ್​ ಪ್ರವೇಶಾತಿಗೆ ಸರ್ಕಾರದ ವತಿಯಿಂದ ನಡೆಸಲಾಗುವ ನೀಟ್​ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್​ ಮೈಂಡ್​ ರಾಕೇಶ್​ ರಂಜನ್​ ಅಲಿಯಾಸ್​ ರಾಕಿ ಎಂಬಾತನನ್ನು ಸಿಬಿಐ ಬಂಧಿಸಿದೆ. ಬಂಧಿತನನ್ನು ಕೋರ್ಟ್​ 10 ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಿದೆ.
ನೀಟ್​ ಪ್ರಶ್ನೆ ಪತ್ರಕೆ ಸೋರಿಕೆ ಸಂಬಂಧ ಪಟ್ನಾ ಹಾಗೂ ಕಲ್ಕತ್ತಾದಲ್ಲಿ ದಾಳಿ ಮಾಡಲಾಗಿತ್ತು. ಈ ವೇಳೆ ಆರೋಪಿ ಸಿಬಿಐ ಬಲೆಗೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ಆದರೆ, ಆರೋಪಿಯನ್ನು ಎಲ್ಲಿ ಬಂಧಿಸಲಾಯಿತು ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 30ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್​ಮೈಂಡ್​ ರಾಕಿಯನ್ನು ಸಿಬಿಐ ಬಂಧಿಸಿದೆ.
ಇದನ್ನೂ ಓದಿ:ಶಾಲಾ ಮಕ್ಕಳಿಂದ ಇದೆಂಥಾ ಹೀನ ಕೃತ್ಯ; 03ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ವಯಸ್ಕರು
ಕಳೆದ ಜುಲೈ 9ರಂದು ಕೇವಲ 2 ದಿನಗಳ ಹಿಂದಷ್ಟೇ ಪೇಪರ್ ಸೋರಿಕೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಸಿಬಿಐ ಬಂಧಿಸಿತ್ತು. ಬಂಧಿತರನ್ನು ಸನ್ನಿ ಕುಮಾರ್ ಮತ್ತು ಇನ್ನೊಬ್ಬ ನೀಟ್ ಅಭ್ಯರ್ಥಿಯ ತಂದೆ ರಂಜೀತ್ ಕುಮಾರ್ ಎಂದು ಗುರುತಿಸಲಾಗಿದೆ. ಸನ್ನಿಯನ್ನು ನಳಂದಾದಿಂದ ಬಂಧಿಸಲಾಗಿದ್ದರೆ, ರಂಜಿತ್‌ನನ್ನು ಗಯಾದಲ್ಲಿ ಬಂಧಿಸಲಾಗಿತ್ತು.
ನೀಟ್​-ಯುಜಿ ಪರೀಕ್ಷೆಯನ್ನು ಮೇ 5 ರಂದು ಭಾರತದಾದ್ಯಂತ ನಡೆಸಲಾಯಿತು. ಅಂದಾಜು 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಕೇಶ್ ರಂಜನ್ ಬಿಹಾರದಿಂದ ಬಂಧಿತ 9ನೇ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡದ ಗುಜರಾತ್ ಮತ್ತು ಡೆಹ್ರಾಡೂನ್‌ನಲ್ಲಿ ಹಲವರನ್ನು ಬಂಧಿಸಲಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one + twenty =
Remember me
