ಓಡಿಶಾ:ಜೂನ್​ 02ರಂದು ಒಡಿಶಾದ ಬಾಲಾಸೋರ್​ನಲ್ಲಿ ಸಂಭವಿಸಿದ್ದ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ(CBI) ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.
ಬಂಧಿತರು ಹಿರಿಯ ವಲಯ ಇಂಜಿನಿಯರ್​(ಸಿಗ್ನಲ್​) ಅರುಣ್​ ಕುಮಾರ್​ ಮಹಾಂತ, ಸೆಕ್ಷನ್​ ಇಂಜಿನಿಯರ್​ ಮೊಹಮ್ಮದ್​ ಅಮಿರ್​ ಖಾನ್​, ಟೆಕ್ನಿಷಿಯನ್​ ಪಪ್ಪು ಕುಮಾರ್​ ಎಂಬಾತನನ್ನು ಸಿಬಿಐ ವಶಕ್ಕೆ ಪಡೆದಿದೆ. ಮೂವರು ಅಧಿಕಾರಿಗಳನ್ನು ಭಾರತ ದಂಡ ಸಂಹಿತೆ(IPC Section) 304(ಕೊಲೆಯಲ್ಲದ ನರಹತ್ಯೆ), 201(ಸಾಕ್ಷ್ಯ ನಾಶ) ಅಡಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
Balasore train accident | CBI has arrested 3 people, senior Section engineer Arun Kumar Mohanta, section engineer Mohammad Amir Khan & technician Pappu Kumar, under sections 304 and 201 CrPCpic.twitter.com/EkXTYFHncd
ಇದನ್ನೂ ಓದಿ:ಏಕಕಾಲದಲ್ಲಿ ನಾಲ್ಕು ಕರುಗಳಿಗೆ ಜನ್ಮ ನೀಡಿದ ಹಸು
ಜೂನ್​ 02ರಂದು ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿರುವ ಬಾಲಾಸೋರ್​ ಬಳಿ ಇರುವ ಬಹನಾಗ ರೈಲ್ವೇ ನಿಲ್ದಾಣದ ಬಳಿ ಕೋರಮಂಡಲ್​ ಎಕ್ಸ್​ಪ್ರೆಸ್​, ಗೂಡ್ಸ್​ ರೈಲು ಹಾಗೂ ಬೆಂಗಳೂರು ಹೌರಾ ಟ್ರೈನ್​ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ 300 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚಿನವರಿಗೆ ಗಂಭೀರ ಗಾಯಗಳಾಗಿತ್ತು.
ಘಟನೆ ನಡೆದ 72 ಘಂಟೆಗಳ ಬಳಿಕ ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಮಾನವ ಲೋಪವೇ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 15 =
Remember me
