ನವದೆಹಲಿ:ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ, ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್​ ಯಾದವ್​ ಅವರಿಗೆ ಜಾರ್ಖಂಡ್​ ಹೈಕೋರ್ಟ್​ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.
ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಆಗಸ್ಟ್​ 25ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ. 950 ಕೋಟಿ ರೂ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದಾದ್ಯಂತ ಅನೇಕ ಸರ್ಕಾರಿ ಖಜಾನೆಗಳಿಂದ ಪಶುಗಳ ಮೇವಿನ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಇದಕ್ಕೆ ಅನುಕೂಲ ಮಾಡಿಕೊಡಲು ಪಶು ಸಂಗೋಪನಾ ಇಲಾಖೆಯಿಂದ ನಕಲಿ ಬಿಲ್ ನೀಡಲಾಗಿತ್ತು ಎನ್ನಲಾಗಿದೆ.
ಬಹುಕೋಟಿ ಮೇವು ಹಗರಣಕ್ಕೆ(ದುಮ್ಕಾ, ಚೈಬಾಸಾ, ಡೊರಾಂಡಾ, ದಿಯೋಗರ್ ಖಜಾನೆಗಳು) ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್​ ಯಾದವ್​ರನ್ನು ಸಿಬಿಐ ನ್ಯಾಯಾಲಯ 2023ರ ಫೆಬ್ರವರಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು. ಡೊರಾಂಡಾ ಖಜಾನೆ ಪ್ರಕರಣದ 99 ಆರೋಪಿಗಳ ಪೈಕಿ 24 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, ಕಳೆದ ವಾರ 46 ಆರೋಪಿಗಳಿಗೆ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 1 =
Remember me
