ನವದೆಹಲಿ :ಮೇ ತಿಂಗಳಲ್ಲಿ ನಡೆಯಬೇಕಿದ್ದ ಸಿಬಿಎಸ್​ಇ ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1 ರಂದು ಪರಿಸ್ಥಿತಿಯನ್ನು ಪರಾಮರ್ಶಿಸಿ ಹೊಸ ದಿನಾಂಕಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ಪರೀಕ್ಷಾ ದಿನಾಂಕವನ್ನು ಕನಿಷ್ಠ 15 ದಿನಗಳ ಕಾಲಾವಕಾಶ ನೀಡಿ ಘೋಷಿಸಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ:10ನೇ ತರಗತಿ ಪಾಸಾದ ಮಹಿಳೆಯರಿಗೆ ಒಳ್ಳೇ ಅವಕಾಶ: ಗ್ರಾಮ ಪಂಚಾಯ್ತಿಗಳಲ್ಲಿ ನೇಮಕಾತಿ
ಇನ್ನು, 10 ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಸಿಬಿಎಸ್​ಇ ಬೋರ್ಡ್ ರೂಪಿಸಲಿರುವ ‘ಆಬ್ದೆಕ್ಟೀವ್ ಕ್ರೈಟೀರಿಯ’ದ ಆಧಾರದ ಮೇಲೆ ಫಲಿತಾಂಶವನ್ನು ಘೋಷಿಸಲಾಗುವುದು ಎನ್ನಲಾಗಿದೆ. ಈ ಪ್ರಕಾರವಾಗಿ ನೀಡಲಾಗುವ ಅಂಕಗಳ ಬಗ್ಗೆ ಅತೃಪ್ತಿ ಹೊಂದಿದ ಯಾವುದೇ ಅಭ್ಯರ್ಥಿಗೆ, ಪರೀಕ್ಷೆ ನಡೆಸಲು ಪೂರಕವಾದ ಸನ್ನಿವೇಶ ಸೃಷ್ಟಿಯಾದಾಗ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ನೀಡಲಾಗುವುದು ಎನ್ನಲಾಗಿದೆ.
ವಿವಿಧ ರಾಜ್ಯಗಳು ಮತ್ತು ವಲಯಗಳಿಂದ ಸಿಬಿಎಸ್​ಇ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಡನೆ ನಡೆಯುತ್ತಿರುವ ಸಮಾಲೋಚನಾ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.(ಏಜೆನ್ಸೀಸ್)
ಕುಂಭ ಮೇಳ : ನಾಲ್ಕು ದಿನಗಳಲ್ಲಿ 1,086 ಕರೊನಾ ಪ್ರಕರಣ

VIDEO | ಬೆಟ್ಟದ ಮೇಲೆ ಓಡಿದ ಸಚಿವರು ! ‘ಹೊಸ ಭಾರತ ಫಿಟ್ ಭಾರತ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + two =
Remember me
