ನವದೆಹಲಿ:ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್​ಇ) ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಿಸಲು ಅವಕಾಶ ಕೋರಿ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಇರಿಸಿದ್ದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ (ಭಾನುವಾರ) ಮೌಲ್ಯಮಾಪನ ಕಾರ್ಯ ಆರಂಭಿಸಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.
ಮನೆಗಳಲ್ಲೇ ಮೌಲ್ಯಮಾಪನ:ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈ ಬಾರಿ ಮೌಲ್ಯಮಾಪನ ಕೇಂದ್ರಗಳ ಬದಲು ಮೌಲ್ಯಮಾಪಕರ ಮನೆಗಳಲ್ಲೇ ನಡೆಯಲಿದೆ. ಕೋವಿಡ್​ 19 ಲಾಕ್​ಡೌನ್​ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಈ ಬಾರಿ ಮನೆಗಳಲ್ಲೇ ಮೌಲ್ಯಮಾಪನ ಮಾಡಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಅನುಮತಿ ನೀಡಿದೆ.
ಇದನ್ನೂ ಓದಿ:ಅಮ್ಮಂದಿರ ದಿನದ ಸ್ಪೆಶಲ್​: ಬಾಲಿವುಡ್​ ತಾಯಂದಿರ ಸಂಭ್ರಮ ನೋಡಿ!
10ನೇ ತರಗತಿಯ 18 ಲಕ್ಷ ವಿದ್ಯಾರ್ಥಿಗಳು ಹಾಗೂ 12ನೇ ತರಗತಿಯ 12 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಇನ್ನು 50 ದಿನಗಳಲ್ಲಿ ಪ್ರಕಟವಾಗಲಿದೆ. ಕೋವಿಡ್​ ಲಾಕ್​ಡೌನ್​ನಿಂದಾಗಿ ಮೌಲ್ಯಮಾಪನ ಕಾರ್ಯ ಆರಂಭಿಸಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸರ್ಕಾರದ ಅನುಮತಿಯನ್ನು ನಿರೀಕ್ಷಿಸುತ್ತಿತ್ತು.
173 ವಿಷಯಗಳ 1.5 ಕೋಟಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಮೌಲ್ಯಮಾಪಕರು ಶೀಘ್ರದಲ್ಲೇ ಮುಗಿಸುವ ಬಗ್ಗೆ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:38 ದಿನ ವೆಂಟಿಲೇಟರ್​ ಹಾಕಿಸಿಕೊಂಡಿದ್ದರೂ ಕೋವಿಡ್​ ಗೆದ್ದ ಹೀರೋ!
ನಿಗದಿತ 3 ಸಾವಿರ ಶಾಲೆಗಳಲ್ಲಿ ಉತ್ತರ ಪತ್ರಿಕೆಗಳನ್ನು ಭದ್ರವಾಗಿರಿಸಲಾಗಿದೆ. ಆ ಶಾಲೆಗಳಿಂದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪಕರ ಮನೆಗಳಿಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಭಾನುವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಈ ಪ್ರಕ್ರಿಯೆ 50 ದಿನಗಳಲ್ಲಿ ಮುಗಿದು, ಫಲಿತಾಂಶ ಪ್ರಕಟವಾಗುವ ಬಗ್ಗೆ ವಿಶ್ವಾಸವಿದೆ ಎಂದು ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ಹೇಳಿದ್ದಾರೆ.
ಷಾ ಅವರ ಆರೋಗ್ಯಕ್ಕೇನಾಯಿತು!?- ಅವರ ಟ್ವೀಟ್​​ನಲ್ಲೇನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
