ದೆಹಲಿ:ಸೆಂಟ್ರ್​​ಲ್ ಬ್ಯುರೋ ಆಫ್​ ಸೆಕೆಂಡರಿ ಎಜ್ಯುಕೇಶನ್​(CBSE) ಇಂದು ಅಧಿಕೃತವಾಗಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಕುರಿತು ಮಂಡಳಿಯು ತನ್ನ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ ನೀಡಿದೆ.
ಇದನ್ನೂ ಓದಿ:ISSF ವರ್ಲ್ಡ್​ಕಪ್​: ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಕನ್ನಡತಿ
cbseresults.nic.inಮತ್ತುcbse.gov.in. ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಈ ವರ್ಷ 87.33% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಅಥವಾ ಮೂರನೇ ಸ್ಥಾನವನ್ನು ಘೋಷಿಸುವುದಿಲ್ಲ ಎಂದು ಮಂಡಳಿ ಹೇಳಿದೆ.
ಸಿಬಿಎಸ್​ಇ 12ನೇ ತರಗತಿ ಫಲಿತಾಂಶವನ್ನು ಹೀಗೆ ಪರಿಶೀಲಿಸಬಹುದು:
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಾಗ್ ಇನ್ ಆಗಿ, ಮುಖಪುಟದಲ್ಲಿ ಕಾಣುವ ಫಲಿತಾಂಶದ ಲಿಂಕ್​ ಮೇಲೆ ಕ್ಲಿಕ್​ ಮಾಡಿ. ನಂತರ ವಿದ್ಯಾರ್ಥಿಗಳು ರೋಲ್ ನಂಬರ್​, ಅಡ್ಮಿಟ್​ ಕಾರ್ಡ್ ಐಡಿ, ಶಾಲಾ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನ ಪರಿಶೀಲಿಸಬಹುದು. ಅಲ್ಲದೇ, ಫಲಿತಾಂಶಗಳು ಡಿಜಿಲಾಕರ್‌ನಲ್ಲಿಯೂ ಲಭ್ಯವಿರುತ್ತವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 17 =
Remember me
