ನವದೆಹಲಿ: ಈ ವರ್ಷ ನಡೆಯುವ ಕೇಂದ್ರೀಯ ಮಾಧ್ಯಮಿಕ ಪರೀಕ್ಷಾ ಮಂಡಳಿಯ (ಸಿಬಿಎಸ್​ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಶೇ. 75 ಹಾಜರಾತಿ ಹೊಂದಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ಹಾಜರಿ ಇರುವವರಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದಿಲ್ಲ.
2020ರ ಜನವರಿ ಒಂದಕ್ಕೆ ಅನ್ವಯವಾಗುವಂತೆ ಹಾಜರಾತಿ ಲೆಕ್ಕ ಹಾಕಲು ಮಂಡಳಿಯು ಇತ್ತೀಚಿನ ನೋಟಿಸ್​ನಲ್ಲಿ ಶಾಲೆಗಳಿಗೆ ಸೂಚಿಸಿದೆ. ಸಿಬಿಎಸ್​ಇ ಬೋರ್ಡ್ ಪರೀಕ್ಷೆಗಳು ಫೆ. 15ರಂದು ಆರಂಭವಾಗಲಿವೆ. ಕಡ್ಡಾಯ ಹಾಜರಾತಿ ಪ್ರಮಾಣ ಸೇರಿ ವಿವಿಧ ಮಾನದಂಡಗಳನ್ನು ಪೂರೈಸುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪತ್ರ (ಅಡ್ಮಿಟ್ ಕಾರ್ಡ್) ನೀಡಲಾಗುತ್ತದೆ. ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಸಕಾರಣ ತಿಳಿಸಿ ಅದಕ್ಕೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಜನವರಿ 7 ರೊಳಗೆ ಸಲ್ಲಿಸಲು ಮಂಡಳಿ ಅವಕಾಶ ಕಲ್ಪಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
