ನವದೆಹಲಿ:ದೇಶದಲ್ಲಿ ಕರೊನಾ ವೈರಸ್​ ಸೋಂಕು ಹರಡುವ ಆತಂಕ ಹೆಚ್ಚಾದ ಹಿನ್ನೆಲೆ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮಾರ್ಚ್​ 19ರಿಂದ ಮಾ.31ರವರೆಗೆ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಡಳಿ ಆದೇಶವನ್ನು ಹೊರಡಿಸಿದೆ. ಮಾ.31ರ ನಂತರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಸದ್ಯದಲ್ಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಲಾಗಿದೆ.
ದೇಶ ಮತ್ತು ವಿದೇಶಗಳಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ಪ್ರತಿದಿನ ಏರಿಕೆ ಕಾಣುತ್ತಿದೆ. ಪ್ರಪಂಚದಾದ್ಯಂತ 2 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕಿರುವುದು ಧೃಡವಾಗಿದ್ದು, ದೇಶದಲ್ಲಿ 166 ಜನರು ಸೋಂಕಿನ ದಾಳಿಗೆ ಒಳಗಾಗಿದ್ದಾರೆ. ದೇಶದಲ್ಲಿ ಈವರೆಗೆ ಮೂರು ಸಾವು ಸಂಭವಿಸಿದೆ.(ಏಜೆನ್ಸೀಸ್​)
ಈ ಸೋಪು ಕರಗೋದೇ ಇಲ್ಲ ಯಾಕೆ? ಎನ್ನುತ್ತ ಬೇಸ್ತು ಬಿದ್ದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + seven =
Remember me
