ನವದೆಹಲಿ:ಸಿಬಿಎಸ್​ಇ 10 ಮತ್ತು 12ನೇ ತರಗತಿ ಫಲಿತಾಂಶ ಈ ವಾರಾಂತ್ಯದೊಳಗೆ ಬರುತ್ತದೆ ಎಂದು ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಮಂಡಳಿ ಒಂದು ಮಾಹಿತಿ ನೀಡಿದೆ. ವಿದ್ಯಾರ್ಥಿಗಳ ಅಂಕ ಸಲ್ಲಿಕೆಯಲ್ಲಿ ಶಾಲೆಗಳು ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಈ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದಿಲ್ಲ ಎಂದು ಹೇಳಲಾಗಿದೆ.
ಸಿಬಿಎಸ್​ಇ 10ನೇ ತರಗತಿ ವಿದ್ಯಾರ್ಥಿಗಳ ಅಂಕವನ್ನು ಶಾಲೆಗಳು ಸಲ್ಲಿಸಬೇಕಿತ್ತು. ಆದರೆ ಕೆಲವು ಶಾಲೆಗಳು ಅಂಕ ಸಲ್ಲಿಕೆ ಮಾಡುವಲ್ಲಿ ವಿಳಂಬ ಮಾಡಿವೆ. ಆ ಕಾರಣ ಜುಲೈ 15ರ ಒಳಗೆ ಫಲಿತಾಂಶ ಪ್ರಕಟಿಸುವುದು ಸಾಧ್ಯವಿಲ್ಲ ಎಂದು ಸಿಬಿಎಸ್‌ಇ ಪರೀಕ್ಷೆಗಳ ನಿಯಂತ್ರಕ ಸನ್ಯಂ ಭರದ್ವಾಜ್ ತಿಳಿಸಿದ್ದಾರೆ. ಅಂಕ ಸಲ್ಲಿಕೆಯಲ್ಲಿ ವಿಳಂಬ ಮಾಡಿರುವ ಶಾಲೆಗಳಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸಿಬಿಎಸ್​ಇ 12ನೇ ತರಗತಿ ಫಲಿತಾಂಶವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಹಾಗಾಗಿ ಈ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗದು. ಜುಲೈ 31ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. 2020ರಲ್ಲಿ ಜುಲೈ 15ರಂದು ಸಿಬಿಎಸ್​ಇ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿತ್ತು. (ಏಜೆನ್ಸೀಸ್)
ಲೋಕೋಪಕಾರದ ಕೆಲಸಕ್ಕಾಗಿ ರಾಗಿಣಿ ದ್ವಿವೇದಿಗೆ ಲೆಜೆಂಡ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಯಿಯನ್ನು ಟ್ರಿಪ್​ ಕರೆದೊಯ್ದು ಅಂತಿಮ ಆಸೆ ಪೂರೈಸಿದ ಮಾಲೀಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
