ಜಮ್ಮು:ಲೈನ್​ ಆಫ್​ ಕಂಟ್ರೋಲ್​ನಲ್ಲಿ ಆಗಾಗ ನಿಯಂತ್ರಣ ಮೀರಿ ಕೆಣಕುವ ಪ್ರಯತ್ನ ಮಾಡುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ಕಾಲು ಕೆದರಿಕೊಂಡು ಮುಂದೆ ಬಂದು ಭಾರತೀಯ ಯೋಧರ ಕೆಣಕಲು ಯತ್ನಿಸಿದೆ.
ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್​ ಜಿಲ್ಲೆಯ ಲೈನ್​ ಆಫ್​ ಕಂಟ್ರೋಲ್​ನಲ್ಲಿರುವ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದೆ.
ಸಂಜೆ 5.30ರ ಸುಮಾರಿಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಪೂಂಛ್​ ಜಿಲ್ಲೆಯ ಎಲ್​ಒಸಿಯಲ್ಲಿನ ಖಸ್ಬಾ, ಕಿರ್ನಿ ಮತ್ತು ಷಹಾಪುರ್ ಸೆಕ್ಟರ್​ಗಳಲ್ಲಿ ಅಪ್ರಚೋದಿತವಾಗಿ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್​ ದೇವೆಂದರ್​ ಆನಂದ್ ತಿಳಿಸಿದ್ದಾರೆ.
ಈ ವರ್ಷದಲ್ಲಿ ಪಾಕಿಸ್ತಾನ ಸುಮಾರು 3,190 ಸಲ ಕದನ ವಿರಾಮ ಉಲ್ಲಂಘಿಸಿದ್ದು, ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದು, 24 ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
