ಗುಜರಾತ್‌:ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಸಾಲಿನಲ್ಲಿ ಪ್ರಮುಖರಾದ ಮುಖೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ಪೂರ್ವ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆದಿದ್ದು, ಕಾರ್ಯಕ್ರಮಕ್ಕೆ ದೊಡ್ಡ ದೊಡ್ಡ ಗಣ್ಯರು ಆಗಮಿಸಿರುವುದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗುತ್ತಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ನಡೆದ ಅನಂತ್-ರಾಧಿಕಾ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮ ಸಖತ್ ಗ್ರ್ಯಾಂಡ್ ಆಗಿ ಮುಗಿದಿದ್ದು, ಹೆಸರಾಂತ ಸೆಲೆಬ್ರಿಟಿಗಳ ದಂಡೇ ಸಮಾರಂಭಕ್ಕೆ ಆಗಮಿಸಿತ್ತು.
ಇದನ್ನೂ ಓದಿ:ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆಗೆ ದಿನಾಂಕ ಫಿಕ್ಸ್​; ಹೀಗಿದೆ ಸುರಂಗದ ವಿಶೇಷತೆ
ಅನಂತ್‌ ಮತ್ತು ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ಝಲಕ್​ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿವೆ. ಮೂರು ದಿನ ಗುಜರಾತ್​ನ ಜಾಮ್‌ನಗರ ಗಣ್ಯಾತಿ ಗಣ್ಯರಿಂದಲೇ ಕಂಗೊಳಿಸಿದೆ. ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅಂತಾರಾಷ್ಟ್ರೀಯ ಕಲಾವಿದರನ್ನು ಭಾರೀ ಹಣ ನೀಡಿ ಕರೆಸಲಾಯಿತು.
ಮೂರು ದಿನಗಳ ಕಾಲ ನಡೆದ ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳ ಫೋಟೋಸ್​ ಇಲ್ಲಿವೆ ನೋಡಿ.

ಬಾಲಿವುಡ್​ ನಟ ಅನಿಲ್ ಕಪೂರ್ ದಂಪತಿ

ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಕುಟುಂಬ

ಸೂಪರ್​ಸ್ಟಾರ್​ ರಜನಿಕಾಂತ್​ ಕುಟುಂಬ

ನಟ ಸೈಫ್ ಅಲಿಖಾನ್ ಮತ್ತು ನಟಿ ಕರೀನಾ ಕಪೂರ್ ಪುತ್ರನ ಜತೆಗೆ ಆಗಮಿಸಿದರು.

ಸದ್ಗುರು ಜಗ್ಗಿವಾಸುದೇವ್​

ರಣಬೀರ್ ಕಪೂರ್​ ಮತ್ತು ಆಲಿಯಾ ಭಟ್​ ದಂಪತಿ

ಬಿಲ್​ಗೇಟ್ಸ್​ ದಂಪತಿ

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ದಂಪತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 10 =
Remember me
