ದೆಹಲಿ:ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಕೇಂದ್ರವು ಶುಭ ಸುದ್ದಿಯೊಂದನ್ನು ನೀಡಿದೆ. ಅಡುಗೆ ಮನೆಯಲ್ಲಿ ಕಂಪನ ಉಂಟು ಮಾಡಿದ್ದ ಅಡುಗೆ ಎಣ್ಣೆ ದರವು ಶೀಘ್ರವೇ ಇಳಿಕೆಯಾಗಲಿದೆ.
ಇದನ್ನೂ ಓದಿ:233 ಮಂದಿಯನ್ನು ಬಲಿಪಡೆದ ಒಡಿಶಾ ರೈಲು ದುರಂತ ಹೇಗಾಯ್ತು? ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…
ಖಾದ್ಯ ತೈಲಗಳ ಚಿಲ್ಲರೆ ಬೆಲೆ(ಎಂಆರ್​ಪಿ) ಇಳಿಕೆ ಕುರಿತು ಚರ್ಚಿಸಲು ಕರೆಯಲಾದ ಎರಡನೇ ಸಭೆಯಲ್ಲಿ ಕೇಂದ್ರವು, ಸಾಲ್ವೆಂಟ್ ಎಕ್ಸ್‌ಟ್ರಾಕ್ಷನ್ ಅಸೋಸಿಯೇಷನ್ ​​ಆಫ್ ಇಂಡಿಯಾ ಮತ್ತು ಭಾರತೀಯ ತರಕಾರಿ ತೈಲ ಉತ್ಪಾದಕರ ಸಂಘದ ಉದ್ಯಮದ ಪ್ರತಿನಿಧಿಗಳ ಸಭೆಯಲ್ಲಿ ನಿರ್ದೇಶನ ನೀಡಿದೆ.
ಜಾಗತಿಕ ಮಾರುಕಟ್ಟೆಗನುಗುಣವಾಗಿ ಅಡುಗೆ ಎಣ್ಣೆಯ ಎಂಆರ್‌ಪಿ ದರವನ್ನು ಪ್ರತಿ ಲೀಟರ್‌ಗೆ 8 ರಿಂದ 12 ರೂ. ಕಡಿಮೆಗೊಳಿಸುವಂತೆ ಕೇಂದ್ರ ಆಹಾರ ಸಚಿವಾಲಯವು ಶುಕ್ರವಾರ ಉದ್ಯಮಗಳಿಗೆ ಸೂಚಿಸಿದೆ.
ಕಳೆದ ಹಲವು ತಿಂಗಳಿನಿಂದ ವಿವಿಧ ಖಾದ್ಯ ತೈಲಗಳ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಸಹಿತ ದೇಶೀಯ ಮಾರುಕಟ್ಟೆಯಲ್ಲಿನ ಬೆಲೆಗಳು ಕಡಿಮೆಯಾಗುತ್ತಿಲ್ಲ. ಹೀಗಾಗಿ ಅಡುಗೆ ಎಣ್ಣೆ ಬೆಲೆಯನ್ನು ಕಡಿತ ಮಾಡುವಂತೆ ಸೂಚಿಸಿಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
