ನವದೆಹಲಿ:ರಾಷ್ಟ್ರದಲ್ಲಿ ಕರೊನಾ ಸೋಂಕು ಹರಡದಂತೆ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ (ಎಸ್​ಡಿಆರ್​ಎಂಎಫ್​) ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ 11,092 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಸಿಎಂಗಳ ಜತೆ ನಡೆಸಿದ್ದ ವಿಡಿಯೋ ಕಾನ್ಫರೆನ್ಸಿಂಗ್​ನಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ 11,0092 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಶುಕ್ರವಾರ ಅನುಮೋದನೆ ನೀಡಿದ್ದಾರೆ.
ಈ ನಿಧಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳು ಕ್ವಾರಂಟೈನ್​ ಸೌಲಭ್ಯ ಕಲ್ಪಿಸಬಹುದು. ರಕ್ತ ಮತ್ತು ಗಂಟಲು ದ್ರವ ಮಾದರಿ ಸಂಗ್ರಹ ಮತ್ತು ಪರಿಶೀಲನೆ, ಹೆಚ್ಚುವರಿ ಪ್ರಯೋಗಾಲಯಗಳ ಸ್ಥಾಪನೆ, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ, ಪೊಲೀಸ್​, ಮುನ್ಸಿಪಲ್​ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗೆ ರಕ್ಷಣಾ ಕವಚಗಳ ಖರೀದಿ, ಥರ್ಮಲ್​ ಸ್ಕ್ಯಾನರ್​ಗಳ ಖರೀದಿ, ವೆಂಟಿಲೇಟರ್​, ಗಾಳಿ ಶುದ್ಧಗೊಳಿಸುವ ಯಂತ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಾದ ವಸ್ತುಗಳ ಖರೀದಿಗೆ ಈ ನಿಧಿಯನ್ನು ಬಳಸಬಹುದಾಗಿದೆ.
ಬ್ರಿಟನ್​ ರಾಜಕುಮಾರ ಚಾರ್ಲ್ಸ್‌ ಕರೊನಾ ಸೋಂಕಿಗೆ ಆಯುರ್ವೇದ ಔಷಧಿ ಪಡೆದಿಲ್ಲ: ರಾಜಮನೆತನದ ವಕ್ತಾರರ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 5 =
Remember me
