ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದೆ. ಮಹತ್ವದ ಸಭೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಅಂತಿಮ ಹಂತದ ಸಿದ್ಧತೆಯಲ್ಲಿದ್ದು, ನಾಳೆಯೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಕೆಲ ಎಂಎಲ್​ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು. ಸಭೆಯ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ನಿನ್ನೆ ಹೇಳಿದ್ದರು.
ಇದನ್ನೂ ಓದಿ:ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಮಾಹಿತಿ ಹೀಗಿದೆ…
ಪ್ರಧಾನ ಮಂತ್ರಿಗಳಾದ ಶ್ರೀ@narendramodiಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ@JPNaddaಅವರ ನೇತೃತ್ವದಲ್ಲಿ ಇಂದು ನವದೆಹಲಿಯ@BJP4Indiaಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ.#BJPYeBharavasepic.twitter.com/Cqgiye7h45— Basavaraj S Bommai (@BSBommai)April 9, 2023
ಪ್ರಧಾನ ಮಂತ್ರಿಗಳಾದ ಶ್ರೀ@narendramodiಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ@JPNaddaಅವರ ನೇತೃತ್ವದಲ್ಲಿ ಇಂದು ನವದೆಹಲಿಯ@BJP4Indiaಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ.#BJPYeBharavasepic.twitter.com/Cqgiye7h45
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯ ಸೇರಿದಂತೆ ಇತರ ರಾಜಕೀಯ ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ:ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ
ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ಗಾಗಿ ಪೈಪೋಟಿ ಇರುವುದು ನಿಜ. ಈಗಾಗಲೇ ಕೆಲವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್​ಗೆ ಕಳುಹಿಸಿದ್ದೇವೆ. ಯಾರು ಗೆಲ್ಲುತ್ತಾರೆ ಎನ್ನುವುದರ ಬಗ್ಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಾರಿ ಸ್ಪಷ್ಟ ಬಹುಮತ ಬರುವುದು ಖಚಿತ ಎಂದು ಬಿಎಸ್​ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 4 =
Remember me
