ನವದೆಹಲಿ:ಹೈನುಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡಲು -ಠಿ; 4,558 ಕೋಟಿ ಮೊತ್ತದ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಇದರಿಂದ ಡೇರಿ ರೈತರ ಸಾಲದ ಮೇಲಿನ ಸಬ್ಸಿಡಿ ಅಥವಾ ಬಡ್ಡಿಗೆ ನೀಡುವ ಸಹಾಯಧನ ಶೇ. 2ರಿಂದ 2.5ಕ್ಕೆ ಏರಿಕೆಯಾಗಲಿದೆ. ಈ ಯೋಜನೆಯಿಂದ ದೇಶದ 95 ಲಕ್ಷ ರೈತರಿಗೆ ಲಾಭವಾಗಲಿದೆ.
ಡೇರಿ ಸಂಸ್ಕರಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಡಿಐಡಿಎಫ್) ಯೋಜನೆಯನ್ವಯ ಸಾಲದ ಮೇಲಿನ ಸಬ್ಸಿಡಿ ಪ್ರಮಾಣ ಹೆಚ್ಚಿಸಲಾಗಿದೆ. ಈ ಯೋಜನೆಯ ಪರಿಷ್ಕೃತ ಅನುದಾನ -ಠಿ;11,184 ಕೋಟಿ ಆಗಲಿದೆ. ರೈತ ಸಮೂಹಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ರೈತೋತ್ಪನ್ನ ಸಂಸ್ಥೆ:2024ರೊಳಗೆ ಹೊಸದಾಗಿ ಸುಮಾರು 10,000 ರೈತೋತ್ಪನ್ನ ಸಂಸ್ಥೆಗಳನ್ನು ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದ್ದು, ಇದಕ್ಕೆ ಬಜೆಟ್​ನಲ್ಲಿ -ಠಿ;4,500 ಕೋಟಿ ರೂಪಾಯಿ ಒದಗಿಸಲಾಗುತ್ತದೆ. ಉತ್ಪಾದನೆ ವೆಚ್ಚ ಕಡಿತ ಹಾಗೂ ರೈತರ ಆದಾಯ ಹೆಚ್ಚಿಸುವುದು ಇದರ ಉದ್ದೇಶ. ಈ ಯೋಜನೆಯಿಂದ 1.50 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.
ಸಂಪುಟದ ಇತರ ನಿರ್ಧಾರ:
ಬೆಳೆ ವಿಮೆ ಯೋಜನೆ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಐಚ್ಛಿಕಗೊಳಿಸುವ ಉದ್ದೇಶದಿಂದ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೃಷಿ ವಿಮೆ ಕುರಿತ ಈ ಯೋಜನೆಯ ಲೋಪದೋಷಗಳನ್ನು ನಿವಾರಿಸಲು ಸರ್ಕಾರ ಕ್ರಮಕೈಗೊಂಡಿದೆ. 2016ರಲ್ಲಿ ಆರಂಭಿಸಲಾದ ಈ ಯೋಜನೆಯನ್ವಯ ಸಾಲ ಪಡೆಯುವ ರೈತರು ವಿಮೆ ಮಾಡಿಸುವುದು ಕಡ್ಡಾಯ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + four =
Remember me
