ನವದೆಹಲಿ:ದೆಹಲಿಯೂ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಐವತ್ತು ತಂಡಗಳನ್ನು ನಿಯೋಜಿಸಿದ್ದು, ಪರಿಸರದ ಮೇಲೆ ತೀವ್ರ ನಿಗಾ ಇಡುವಂತೆ ಅವುಗಳಿಗೆ ಸೂಚಿಸಿದೆ. ಅಷ್ಟಕ್ಕೂ ಆ ತಂಡಗಳು ಯಾವ್ಯಾವು, ಯಾವ್ಯಾವ ರಾಜ್ಯಗಳಿಗೆ ಅವುಗಳನ್ನು ನಿಯೋಜಿಸಲಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಕೇಂದ್ರ ಪರಿಸರ ಸಚಿವ ಪ್ರಕಾಶ್​ ಜಾವಡೇಕರ್​ ಅವರು ದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಪಂಜಾಬ್​ ಮತ್ತು ಹರಿಯಾಣ ರಾಜ್ಯಗಳ ಸಚಿವರು ಹಾಗೂ ಇಲಾಖಾ ಮುಖ್ಯಸ್ಥರ ಜತೆ ಸಭೆ ನಡೆಸಿದ ಬಳಿಕ ಈ ವಿಷಯವನ್ನು ಘೋಷಿಸಿದ್ದಾರೆ.
ಕೂಳೆ ಸುಡುವುದರ ಮೇಲೆ ನಿಗಾ ಇರಿಸಲು ಹಾಗೂ ಪರಿಸರ ಮಾಲಿನ್ಯಕ್ಕೆ ತಡೆವೊಡ್ಡಲು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ (ಸಿಪಿಸಿಬಿ)ಯ 50 ತಂಡಗಳನ್ನು ನಿಯೋಜಿಸಲಾಗಿದ್ದು, ಈ ಐದು ರಾಜ್ಯಗಳಲ್ಲಿ ಅವು ತೀವ್ರ ನಿಗಾ ಇಡಲಿವೆ. ನವೆಂಬರ್​ ಸಮಯಕ್ಕೆ ಪರಿಸರ ಮಾಲಿನ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 10 =
Remember me
