ನವದೆಹಲಿ:ಅಗ್ನಿವೀರರಿಗೆ ಪಿಂಚಣಿಗೆ ಬಜೆಟ್‌ನಲ್ಲಿ ಯಾವುದೇ ಅವಕಾಶ ಕಲ್ಪಿಸಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಯಾವಾಗ ಕೇಳಿದರೂ ಸದನದಲ್ಲಿ ಸಮಗ್ರ ಮಾಹಿತಿ ನೀಡಲು ಸಿದ್ಧ ಎಂದರು.
ಇದನ್ನೂ ಓದಿ:ಕಾಡಿನಲ್ಲಿ ವಿದೇಶಿ ವೃದ್ದೆಯನ್ನು ಮರಕ್ಕೆ ಕಟ್ಟಿಹಾಕಿದ ದುರುಳರು.. ಬಳಿಕ ನಡೆದಿದ್ದು..?
ರಾಹುಲ್ ಭಾಷಣ ಮುಗಿದ ತಕ್ಷಣ ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಅಗ್ನಿವೀರ್ ಯೋಜನೆಯಲ್ಲಿ ದೇಶವನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
“ರಾಷ್ಟ್ರೀಯ ಭದ್ರತೆಯ ವಿಷಯವು ಬಹಳ ಸೂಕ್ಷ್ಮವಾಗಿದೆ. ಅಗ್ನಿವೀರ್ ಜವಾನರ ಬಗ್ಗೆ ದೇಶವನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ನೀವು (ಸ್ಪೀಕರ್) ಆದೇಶಿಸಿದಾಗಲೆಲ್ಲಾ ಅಗ್ನಿವೀರ್ ಸೈನಿಕರ ವಿಚಾರವಾಗಿ ಸದನದಲ್ಲಿ ಹೇಳಿಕೆ ನೀಡಲು ಸಿದ್ಧ ಎಂದು ರಾಜನಾಥ್ ಹೇಳಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಹುತಾತ್ಮ ಯೋಧರಿಗೆ ಪರಿಹಾರ ನೀಡುವ ವಿಚಾರವನ್ನು ಪ್ರಸ್ತಾಪಿಸಿದರು. ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಅಗ್ನಿವೀರ್ ಗೆ ವಿಮೆ ನೀಡಲಾಗಿದ್ದರೂ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ ಎಂದು ಹೇಳಿದರು.
ಹಾವು ಕಡಿತದಿಂದ ಮೃತಪಡುವವರ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ: ಬಿಜೆಪಿ ಸಂಸದ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + 19 =
Remember me
